ನೆಲೆಯಿಲ್ಲದ ಮಹಾಜಲದೊಳಗೆ ಮಲಗಿರ್ದ

ವಿಕಿಸೋರ್ಸ್ದಿಂದ



Pages   (key to Page Status)   


ನೆಲೆಯಿಲ್ಲದ ಮಹಾಜಲದೊಳಗೆ ಮಲಗಿರ್ದ ಸರ್ಪನ ಫಣವ ನೋಡಲು
ಬೆಳಬೆಳಗುತ್ತಿರ್ದವು ರಜತ ಹೇಮವೆಂಬ ಎರಡು ಕುಲಗಿರಿಗಳು. ಎಡದ ಕೈಯಲ್ಲಿ ರಜತಗಿರಿಯಂ ಪಿಡಿದು ಬಲದ ಕೈಯಲ್ಲಿ ಹೇಮಾದ್ರಿಯಂ ಪಿಡಿದು ಮಹಾದಂಡಿಯ ಫಣಿಯ ಒದೆಯಲು ನೆಗಹಿತ್ತು ಈರೇಳು ಭುವನವ. ಅಲ್ಲಿಂದ ಮೇಲೆ
ಗಿರಿ ಎರಡು ವರ್ಣವಳಿದು ಅಡಗಿದವು ಚಿಕ್ಕಾಡಿನ ಹೃದಯದಲ್ಲಿ ! ಚಿಕ್ಕಾಡು ಕಂದೆರೆದು ಕಂಡಿತ್ತು ಚಿದಾಕಾಶವೆಂಬ ಶಿವಾಲಯವ ! ಅಂಗವಿಲ್ಲದ ಶೃಂಗಾರಕ್ಕೆ ಭಂಗ ಉಂಟೆ ?_ಇಲ್ಲವಾಗಿ
ಗುಹೇಶ್ವರನೆಂಬ ಶಬ್ದಬ್ರಹ್ಮಕ್ಕೆ ಮುದ್ರಿಕೆಯಾಯಿತ್ತು.