ನೆಳಲ ಹೂಳಿಹೆನೆಂದು ಬಳಲುತ್ತಿದೆ

ವಿಕಿಸೋರ್ಸ್ದಿಂದ



Pages   (key to Page Status)   


ನೆಳಲ ಹೂಳಿಹೆನೆಂದು ಬಳಲುತ್ತಿದೆ ಜಗವೆಲ್ಲಾ. ನೆಳಲು ಸಾಯಬಲ್ಲುದೆ ಅಂಗಪ್ರಾಣಿಗಳಿಗೆ ? ಸಮುದ್ರದಾಚೆಯ ತಡಿಯಲ್ಲಿ ಕಳ್ಳನ ಕಂಡು
ಇಲ್ಲಿಂದ ಮುನಿದು ಬೈದಡೆ
ಅವ ಸಾಯಬಲ್ಲನೆ ? ಭಾವದಲ್ಲಿ ಹೊಲಿದ ಹೊಲಿಗೆಯ ಭೇದವನರಿಯರು
ಕಾಮಿಸಿದಡುಂಟೆ ನಮ್ಮ ಗುಹೇಶ್ವರಲಿಂಗವು ?