ನೇತ್ರದ ! ಸೂತ್ರದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನೇತ್ರದ ಸೂತ್ರದಲ್ಲಿ ಸಕಲ ವಿಸ್ತಾರದ ರೂಪಿರ್ಪುದನಾರೂ ಅರಿಯರಲ್ಲ ! ಅದೆಂತೆಂದೊಡೆ :``ನೇತ್ರದೇವೋ ನ ಚ ಪರಃ ಎಂಬ ಶ್ರುತಿ ಸಾಕ್ಷಿಯಾಗಿ ನೇತ್ರವೆ ಶಿವನೆಂದರಿದು
ಆ ಶಿವನಿರ್ದಲ್ಲಿಯೆ ಕೈಲಾಸ ಮೇರು ಮಂದರವಿರ್ಪುವು. ಆ ಶಿವನಿರ್ದಲ್ಲಿಯೆ ಸಕಲಪ್ರಮಥಗಣಂಗಳಿರ್ಪರು. ಆ ಶಿವನಿರ್ದಲ್ಲಿಯೆ ಸಕಲತೀರ್ಥಕ್ಷೇತ್ರಂಗಳಿರ್ಪುವು. ಆ ಶಿವನಿರ್ದಲ್ಲಿಯೆ ಸಕಲವೇದವೇದಾಂತಗಳಿರ್ಪುವು. ಆ ಶಿವನಿರ್ದಲ್ಲಿಯೆ ಸಕಲ ಸಚರಾಚರಂಗಳಿರ್ಪುವು. ಇಂತೀ ಸಕಲವಿಸ್ತಾರವನೊಳಕೊಂಡ ನೇತ್ರದ ನಿಲವು ನೀನೇ ಅಯ್ಯಾ ಅಖಂಡೇಶ್ವರಾ.