ನೋಡೆನೆಂಬವರ ನೋಡಿಸುವೆ, ನುಡಿಯೆನೆಂಬವರ

ವಿಕಿಸೋರ್ಸ್ದಿಂದ


Pages   (key to Page Status)   

ನೋಡೆನೆಂಬವರ ನೋಡಿಸುವೆ
ನುಡಿಯೆನೆಂಬವರ ನುಡಿಯಿಸುವೆ
ಒಲ್ಲೆನೆಂಬವರನೊಲಿಸುವೆ
ಒಲಿದೆನೆಂಬವರ ತೊಲಗಿಸುವೆ ನೋಡಯ್ಯಾ. ಚೆನ್ನಮಲ್ಲಿಕಾರ್ಜುನಯ್ಯಾ
ನೀನಲ್ಲದನ್ಯರ ಮುಖದ ನೋಡೆನೆಂದಡೆ ನೋಡುವಂತೆ ಮಾಡಿದೆಯಲ್ಲಾ ಲಿಂಗವೆ?