ಪಂಚವರ್ಣದಬಿಂದು ಪ್ರಪಂಚವನಳಿದುಳಿದಿರಲು, ಸಂಚರಿಸುವಡೆ

ವಿಕಿಸೋರ್ಸ್ದಿಂದ



Pages   (key to Page Status)   


ಪಂಚವರ್ಣದಬಿಂದು ಪ್ರಪಂಚವನಳಿದುಳಿದಿರಲು
ಸಂಚರಿಸುವಡೆ ಆವೆಡೆಯೂ ಇಲ್ಲ. ನಿಂದ ಚಿತ್ತಿನ ಪ್ರಭೆ ಅಂಗವನು ನೆರೆ ನುಂಗೆ
ಹಿಂದು ಮುಂದು ಎಡಬಲನೆಂಬುದಿಲ್ಲ ! ಅಡಿಯಾಕಾಶವೆಂಬುದಿಲ್ಲ ಕೆಳಗೆ ನಿಲಲು
ಆಧಾರ ಮೊದಲಿಂಗಿಲ್ಲ ಕಡೆಗೆ ಸಾರುವೆನೆನಲು ಊಧ್ರ್ವವಿಲ್ಲ. ನಡುವೆ ನಾನಿದ್ದಿಹೆನೆಂದಡೆ
ತನ್ನೊಡಲೊಳಗೆ ಒಡೆದು ಮೂಡಿತ್ತು ತನ್ನಂತೆ ಬಯಲು ! ಈ ಬೆಡಗು ಬಿನ್ನಾಣವ ಬಡವರರಿವರೆ ? ಇದನರಿದು ನುಡಿದು ತೋರಿದನು ಗುಹೇಶ್ವರನ ಶರಣ ಚನ್ನಬಸವಣ್ಣನು.