ಪಟವಾಕಾಶವನಡರಿತ್ತೆಂದಡೆ, ಪಟಸೂತ್ರದ ಸಂಚು

From ವಿಕಿಸೋರ್ಸ್
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಪಟವಾಕಾಶವನಡರಿತ್ತೆಂದಡೆ
ಪಟಸೂತ್ರದ ಸಂಚು ಕೆಳಗಿಪ್ಪುದು ನೋಡಾ ! ವ್ಯೋಮದಲ್ಲಿ ಚರಿಸುವ ಸೋಮಸೂರ್ಯರೆಂದಡೆ ಹೇಮಗಿರಿಯ ಸಂಚ ತಪ್ಪದು ನೋಡಾ ! ಭೂಮಿಯನೊಲ್ಲದೆ ಗಗನಕ್ಕೆ ಹಾರಿದವಂಗೆ
ಆ ವ್ಯೋಮದಲ್ಲಿ ನಿಲುವುದಕ್ಕೆ ಒಂದೆಡೆಯುಂಟೆ ? ನಮ್ಮ ಕೂಡಲಚೆನ್ನಸಂಗನ ಶರಣರೊಳಗಿರ್ದು ಸೀಮೆಯ ಮೀರಿದ ನಿಸ್ಸೀಮನು ಸಿದ್ಧರಾಮಯ್ಯನೆಂಬ ಮಾತು ಅಂತಿರಲಯ್ಯಾ ಪ್ರಭುವೆ.