ಪಡುವ ಕಚ್ಚಿದ ನಾಯಿ
ಗೋಚರ
ಲೇಖಕರು: ತೊಂಟದ ಸಿದ್ಧಲಿಂಗೇಶ್ವರ ಶಿವಯೋಗಿಗಳು
ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಪಡುವ ಕಚ್ಚಿದ ನಾಯಿ ಒಡೆಯನ ಕುರುಹ ಬಲ್ಲುದೆ? ಹೊನ್ನು ಹೆಣ್ಣು ಮಣ್ಣ ಕಚ್ಚಿದ ಮನುಜರು ನಿಮ್ಮನೆತ್ತ ಬಲ್ಲರಯ್ಯ? ನಿಮ್ಮನರಿಯದ ಮನುಜರು ನಾಯಕುನ್ನಿಗಿಂದಲೂ ಕರಕಷ್ಟ ನೋಡಾ ನಿತ್ಯವ ಹಿಡಿಯದೆ
ಅನಿತ್ಯವ ಹಿಡಿದು
ವ್ಯರ್ಥಕ್ಕೆ ಸತ್ತವರ ನೋಡಿ ಹೇಸಿದೆನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.