ಪದವನರ್ಪಿಸಬಹುದಲ್ಲದೆ ಪದಾರ್ಥವನರ್ಪಿಸಬಾರದು. ಓಗರವನರ್ಪಿಸಬಹುದಲ್ಲದೆ ಪ್ರಸಾದವನರ್ಪಿಸಬಾರದು. ಗುಹೇಶ್ವರಾ ನಿಮ್ಮ ಶರಣರು ಹಿಂದ ನೋಡಿ ಮುಂದನರ್ಪಿಸುವರು.