ಪರವನರಿದ ಸತ್ಪುರುಷರ ಸಂಗದಿಂದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಪರವನರಿದ ಸತ್ಪುರುಷರ ಸಂಗದಿಂದ ಶಿವಯೋಗದ ವಚನಾಮೃತವನು
ಸದ್ಭಕ್ತಿಯುಳ್ಳ ಮಹೇಶ್ವರನು ತನ್ನ ಶ್ರೋತ್ರಮುಖದಲ್ಲಿ ಕೇಳಿ
ಮನೋಮುಖದಲ್ಲಿ ಹಾರೈಸಿ
ತೃಪ್ತಿಮುಖದಲ್ಲಿ ಸಂತೋಷವನೆಯ್ದಬಲ್ಲಡೆ ಆ ಸುಖವು ಪರಿಣಾಮವನೊಡಗೂಡುವುದು ! ಹೀಂಗಲ್ಲದೆ
ಸಂಸಾರವಿಷಯರಸವ ತಮ್ಮ ಹೃದಯಕೂಪದಲ್ಲಿ ತುಂಬಿಕೊಂಡಿಪ್ಪ ಜೀವರು ಕಾಯದಲ್ಲಿ ವಚನಾಮೃತವ ತುಂಬಿದಡೆ
ಭಿನ್ನಘಟದಲ್ಲಿ ಉದಕವ ಹೊಯ್ದಂತೆ ಕಾಣಾ ಗುಹೇಶ್ವರಾ.