Transclusion_Status_Detection_Tool

ಪರಶಿವನ ಜ್ಞಾನಚಕ್ಷುವಿನಲ್ಲಿ ಉದಯವಾದ

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು



Pages   (key to Page Status)   


ಪರಶಿವನ ಜ್ಞಾನಚಕ್ಷುವಿನಲ್ಲಿ ಉದಯವಾದ ರುದ್ರಾಕ್ಷೆಯ ಹಸ್ತ ತೋಳು ಉರ ಕಂಠ ಕರ್ಣ ಮಸ್ತಕದಲ್ಲಿ ಧರಿಸಿದ ಶಿವಶರಣನೇ ರುದ್ರನು. ಆ ರುದ್ರಾಕ್ಷೆಯ ಜಪಿಸಿದಾತನೇ ಸದ್ಯೋನ್ಮುಕ್ತನು. ಇದು ಕಾರಣ
ಅಜ ಹರ ಸುರ ಮನು ಮುನೀಶ್ವರರು ಶ್ರೀವಿಭೂತಿ ರುದ್ರಾಕ್ಷೆಯನೆ ಧರಿಸಿ ಶಿವಲಿಂಗಾರ್ಚನೆಯ ಮಾಡುತ್ತಿಪ್ಪರು. ಪ್ರಮಥಗಣ ರುದ್ರಗಣ ಮುಖ್ಯವಾದ ಗಣಾದ್ಥೀಶ್ವರರು ವಿಭೂತಿ ರುದ್ರಾಕ್ಷೆಯನೆ ಧರಿಸಿ
ಪ್ರಣವ ಪಂಚಾಕ್ಷರಿಯನೆ ಜಪಿಸಿ
ಪ್ರಣವ ಸ್ವರೂಪಿಗಳಾಗುತ್ತಿಪ್ಪರು. ನೋಡಿದವರು ಮುಟ್ಟಿದವರು ಧರಿಸಿದವರು ಜಪಿಸಿದವರೆಲ್ಲ ಸಕಲ ಪ್ರಪಂಚನಳಿದು ಪರಶಿವ ಸ್ವರೂಪರಪ್ಪುದು ತಪ್ಪದು ನೋಡಾ. ಇದು ಕಾರಣ
ನಾನು ವಿಭೂತಿ ರುದ್ರಾಕ್ಷೆಯನೆ ಧರಿಸಿ
ಶಿವಲಿಂಗಾರ್ಚನೆಯನೆ ಮಾಡಿ ಪ್ರಣವ ಪಂಚಾಕ್ಷರಿಯನೆ ಜಪಿಸುತ್ತಿದ್ದೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.