ಪರುಷವಾದರೂ ಒಂದರಲ್ಲಿ ಇರಿಸಬೇಕು. ರತ್ನವಿಶೇಷವಾದಡೂ ಕುಂದಣದಲ್ಲಿ ಬಂಧಿಸಿ ಸಂಧಿಸಬೇಕು. ಲಿಂಗವ ಹಿಡಿದಲ್ಲಿ ಪೂಜಿಸುವ ಅಂಗವಿರಬೇಕು. ಇದು ಕಾರಣ ಗುಹೇಶ್ವರಲಿಂಗವನರಿದು ಮರೆಯಲಿಲ್ಲ ಕಾಣಾ ಚಂದಯ್ಯಾ.