Library-logo-blue-outline.png
View-refresh.svg
Transclusion_Status_Detection_Tool

ಪರುಷವ ತಂದು ಕಬ್ಬುನಕ್ಕೆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಪರುಷವ ತಂದು ಕಬ್ಬುನಕ್ಕೆ ಮುಟ್ಟಿಸಲು ಚಿನ್ನವಪ್ಪುದಲ್ಲದೆ ಪರುಷವಾಗಬಲ್ಲುದೆ ? ಈ ಲೋಕದ ಮನುಜರು ಶಿವಲಿಂಗವ ಕಟ್ಟಿದರೇನು
ಲಿಂಗವಂತರಲ್ಲದೆ ಪ್ರಾಣಲಿಂಗಸಂಬಂಧಿಗಳಾಗಬಲ್ಲರೆ ? ಶರಣ ಆವ ಕುಲದಲ್ಲಿ ಹುಟ್ಟಿದರೇನು ಆತನು
ಆಚಾರ ವೀರಶೈವಸಂಪನ್ನಸಿದ್ಧಾಂತ ಕ್ರಿಯಾ ಜ್ಞಾನ ಅನುಭಾವಯುಕ್ತವಾದ ಪ್ರಾಣಲಿಂಗಸಂಪನ್ನ. ಆದಿ ಅನಾದಿಯಿಲ್ಲದಂದಿನ ನಿಃಕಲ ನಿಶ್ಶೂನ್ಯ ನಿರ್ಭೇದ್ಯ ನಿರಾಳ ನಿರಂಜನ ಪರಾತ್ಪರತರನು ತಾನೆ ನೋಡಾ. ಅಂತಪ್ಪ ಮಹಾತ್ಮನ ಕುಲಜನಕುಲಜನೆಂದು ಸಂದೇಹ ಸಂಕಲ್ಪದಿಂದ ದೂಷಿಸಿ ಜರೆವ ದುರಾಚಾರಿ [ಗಳ] ಬಾಯಲ್ಲಿ ಬಾಲಹುಳ ಸುರಿಯದೆ ಮಾಣ್ಬುದೆ ಗುಹೇಶ್ವರಾ.