Library-logo-blue-outline.png
View-refresh.svg
Transclusion_Status_Detection_Tool

ಪರುಷ ಸೋಂಕಿಯೂ ಪಾಷಾಣ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಪರುಷ ಸೋಂಕಿಯೂ ಪಾಷಾಣ ಶುದ್ಧವಾಗದಿದ್ದರೆ ಆ ಪರುಷದ ಗೊಡವೆ ಏತಕಯ್ಯ? ಅಗ್ನಿ ಸೋಂಕಿಯೂ ಕಾಷ*ದ ಗುಣವಳಿಯದಿದ್ದರೆ ಆ ಅಗ್ನಿಯ ಗೊಡವೆ ಏತಕಯ್ಯ? ಗರುಡನಿದ್ದೂ ಸರ್ಪದ ಭಯ ಹಿಂಗದಿದ್ದರೆ ಆ ಗರುಡನ ಗೊಡವೆ ಏತಕಯ್ಯ? ವಜ್ರಾಂಗಿಯ ತೊಟ್ಟಿರ್ದೂ ಬಾಣದ ಭಯ ಹಿಂಗದಿದ್ದರೆ ಆ ವಜ್ರಾಂಗಿಯ ಗೊಡವೆ ಏತಕಯ್ಯ? ಆನೆಯನೇರಿಯೂ ಶ್ವಾನನ ಭಯಹಿಂಗದಿದ್ದರೆ ಆ ಆನೆಯ ಗೊಡವೆ ಏತಕಯ್ಯ? ಜ್ಯೋತಿಯಿದ್ದೂ ಕತ್ತಲೆ ಹರೆಯದಿದ್ದರೆ ಆ ಜ್ಯೋತಿಯ ಗೊಡವೆ ಏತಕಯ್ಯ? ಅಂಗದ ಮೇಲೆ ಚಿದ್ಘನಲಿಂಗವ ಧರಿಸಿದ್ದು ತನುಮನದ ಅವಗುಣ ಹಿಂಗದಿದ್ದರೆ ಆ ಲಿಂಗದ ಗೊಡವೆ ಏತಕಯ್ಯ? ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ
ನೀವು ಸೋಂಕಿಯೂ ಭವ ಹಿಂಗದಿದ್ದರೆ ನಿಮಗೆ ಕುಂದಯ್ಯ.