ಪಶ್ಚಿಮಪದ್ಮಾಸನದಲ್ಲಿ ಕುಳ್ಳಿರ್ದು, ನಿಟ್ಟೆಲುವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಪಶ್ಚಿಮಪದ್ಮಾಸನದಲ್ಲಿ ಕುಳ್ಳಿರ್ದು
ನಿಟ್ಟೆಲುವ ನೆಟ್ಟನೆ ಮಾಡಿ
ಅಧೋಮುಖ ಕಮಲವ ಬಲಿದು
ಊಧ್ರ್ವಮುಖವ ಮಾಡಿ
ಇಂದ್ರಿಯಂಗಳನು ಏಕಮುಖವ ಮಾಡಿ
ಚಂದ್ರ ಸೂರ್ಯರನೊಂದಠಾವಿನಲ್ಲಿರಿಸಿ ಅತ್ತಿತ್ತ ಮಿಸುಕದೆ ನಡುಗೀರ ಜ್ಯೋತಿಯ ದೃಢವಾಗಿ ಹಿಡಿದು
ಪರಮಾನಂದದ ವಠದೊಳಗೆ
ಪ್ರಾಣಲಿಂಗಾರ್ಚನೆಯ ಮಾಡುವ ಮಹಾಮಹಿಮರ ತೋರಿ ಬದುಕಿಸಾ
ಕೂಡಲಚೆನ್ನಸಂಗಯ್ಯಾ.