Library-logo-blue-outline.png
View-refresh.svg
Transclusion_Status_Detection_Tool

ಪಾತಕ ಮಹಾಪಾತಕವ ಮಾಡಿದವನು

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ಪಾತಕ ಮಹಾಪಾತಕವ ಮಾಡಿದವನು ಸದ್ಭಕ್ತರ ಮನೆಗೆ ಹೋಗಿ
ಅವರೊಕ್ಕ ಪ್ರಸಾದವನಾಯ್ದುಂಡಡೆ
ಸಕಲ ಬ್ರಹ್ಮಹತ್ಯಾದಿ ಪಾತಕ ಪರಿಹಾರ. ಒಮ್ಮೆ ಬೇಡಿಕೊಂಡುಂಡಡೆ ! ಪಾತಕೇ ಸಮನುಪ್ರಾಪ್ತೇ ಶಿವಭಕ್ತಗೃಹಂ ವ್ರಜೇತ್ ಯಾಚಯೇದನ್ನಮಮೃತಂ ತದಲಾಭೇ ಜಲಂ ಪಿಬೇತ್ ಇದು ಕಾರಣ ಕೂಡಲಸಂಗಮದೇವಾ
ನಿಮ್ಮ ಸದ್ಭಕ್ತರಿಗೆ ನಮೋ ನಮೋ ಎಂಬೆನು. 470