ಪಾತಾಳದಿಂದತ್ತ ಮಾತ ಬಲ್ಲವರಿಲ್ಲ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಪಾತಾಳದಿಂದತ್ತ ಮಾತ ಬಲ್ಲವರಿಲ್ಲ
ಗಗನದಿಂದ ಮೇಲೆ ಅನುಭಾವ ತಾನಿಲ್ಲ. ಒಳಗಣ ಜ್ಯೋತಿಯ ಬೆಳಗ ಬಲ್ಲವರಿಲ್ಲ; ಹೊರಗಣ ಹೊರಗನು ಅರಿಯಬಲ್ಲವರಿಲ್ಲ. ಹಿಂದಣ ಹಿಂದನು
ಮುಂದಣ ಮುಂದನು
ತಂದು ತೋರಿದ ನಮ್ಮ ಗುಹೇಶ್ವರನು.