Library-logo-blue-outline.png
View-refresh.svg
Transclusion_Status_Detection_Tool

ಪಾದಪೂಜೆಯ ಮಾಡಿ, ಅಂಗುಷ್ಠವೆರಡು

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಪಾದಪೂಜೆಯ ಮಾಡಿ
ಅಂಗುಷ್ಠವೆರಡು ಅಂಗುಲವೆಂಟು ಉಭಯಹಸ್ತದಲ್ಲಿ ಮಾಡಿಕೊಂಬುದೆ ಶಿಕ್ಷಾಪಾದೋದಕ. ಲಿಂಗಧಾರೀ ಮಹಾಯೋಗೀ ಚರಪಾದೋದಕಂ ವಿನಾ ದಿನೇನ ದಶಜನ್ಮಾನಿ ಮಾಸೇನ ಶತಜನ್ಮಸು ವರ್ಷೇ ಸಹಸ್ರಜನ್ಮಾನಿ ವರ್ಷಾರ್ಧೇ ಘೂಕವಾಯ¸õ್ಞ ದ್ವಿವರ್ಷೇ ¸õ್ಞಕರೇ ಗರ್ಭೇ ಜಾಯತೇ ನಾತ್ರ ಸಂಶಯಃ ಎಂದುದಾಗಿ ಆ ಶಿಕ್ಷಾಪಾದೋದಕವನೆ ಆ ವಿಭೂತಿಯಲ್ಲಿ ಸಮ್ಮಿಶ್ರವ ಮಾಡಿ ಲಲಾಟ ಮೊದಲಾದ ನಾಲ್ವತ್ತೆಂಟು ಸ್ಥಾನಂಗಳಲ್ಲಿ ಧಾರಣವ ಮಾಡುವುದು ಇದು ವೀರಶೈವರಿಗೆ ಸಲ್ಲುವ ನಡತೆ. ಶುದ್ಧಶೈವರಿಗೆ ಗಿಂಡಿಯಲ್ಲಿ ತುಂಬುವ ನಡತೆ. ವಿಶೇಷವೀರಶೈವರು ಗಿಂಡಿಯ ಮಾಡಲಾಗದು
ಅದೇನು ಕಾರಣವೆಂದಡೆ:ಅವರಿಗೆ ತ್ರಿವಿಧ ಪಾದೋದಕವು ನಿತ್ಯದ ಸಹಬಂಧವಾಗುವುದೆಂದು. [ಇದ]ನರಿದು ಆಚರಿಸುವಾತನೆ ನಿತ್ಯಮುಕ್ತನಯ್ಯಾ ಕೂಡಲಚೆನ್ನಸಂಗಮದೇವಾ.