ಪಾರ್ವತಿಯು ಪರಶಿವನ ಸತಿಯೆಂಬ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಪಾರ್ವತಿಯು ಪರಶಿವನ ಸತಿಯೆಂಬ ಶಿವದ್ರೋಹಿಗಳು ನೀವು ಕೇಳಿರೆ. ಬೆನಕನು ಪರಶಿವನ ಮಗನೆಂಬ ಪಾತಕ ದುಃಖಿಗಳು ನೀವು ಕೇಳಿರೆ. ಸ್ವಾಮಿ ಕಾರ್ತಿಕೇಯನು ನಮ್ಮ ಹರಲಿಂಗನ ಮಗನೆಂಬ ಲಿಂಗದ್ರೋಹಿಗಳು ನೀವು ಕೇಳಿರೆ. ಭೈರವನು ಭಯಂಕರಹರನ ಮಗನೆಂಬ ಭವಹರಗುರುದ್ರೋಹಿಗಳು ನೀವು ಕೇಳಿರೆ. ಅಜಾತನ ಚರಿತ್ರ ಪವಿತ್ರ. ನಮ್ಮ ಗುಹೇಶ್ವರಲಿಂಗಕ್ಕೆ ಪ್ರಸಾದವ ಸಲಿಸಿದಾತ ಪೂರ್ವಾಚಾರಿ ಸಂಗನಬಸವಣ್ಣನ ಮಗನಾಗಿ
ಆದಿಯ ಲಿಂಗ ಅನಾದಿಯ ಶರಣ ಗುರುವಿನ ಗುರು ಪರಮಗುರುವರ[ನ] ತೋರಿದೆನಯ್ಯಾ ಸಿದ್ಧರಾಮಯ್ಯ ಚೆನ್ನಬಸವಣ್ಣನು