ಪಿಂಡದೊಳಗೆ ಪ್ರಾಣವಿರ್ಪುದ ಎಲ್ಲರೂ ಬಲ್ಲರಲ್ಲದೆ
ಪ್ರಾಣದೊಳಗೆ ಶಬ್ದವಿರ್ಪುದನಾರೂ ಅರಿಯರಲ್ಲ. ಪ್ರಾಣದೊಳಗೆ ಶಬ್ದವಿರ್ಪುದ ಎಲ್ಲರೂ ಬಲ್ಲರಲ್ಲದೆ
ಶಬ್ದದೊಳಗೆ ನಾದವಿರ್ಪುದನಾರೂ ಅರಿಯರಲ್ಲ. ಶಬ್ದದೊಳಗೆ ನಾದವಿರ್ಪುದ ಎಲ್ಲರೂ ಬಲ್ಲರಲ್ಲದೆ
ನಾದದೊಳಗೆ ಮಂತ್ರವಿರ್ಪುದನಾರೂ ಅರಿಯರಲ್ಲ. ಮಂತ್ರದೊಳಗೆ ಶಿವನಿರ್ಪುದ ಎಲ್ಲರೂ ಬಲ್ಲರಲ್ಲದೆ
ಶಿವನ ಕೂಡುವ ಅವಿರಳಸಮರಸವನಾರೂ ಅರಿಯರಲ್ಲ ಅಖಂಡೇಶ್ವರಾ.