ಪುಟ:ಅಲ್ಲಮಪ್ರಭು ವಚನಸಂಪುಟ - ೨.pdf/೪೩೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

ಹೆಚ್ಚಿನ ವಚನಗಳು ೧೫೦ ಪುಣ್ಯಪಾಪವಿಲ್ಲಾಗಿ ಜನನದ ಹಂಗಿಲ್ಲ. ಬಂದುದನುಂಬನಾಗಿ ಮಾನವರ ಹಂಗಿಲ್ಲ. ಭವಗೆಟ್ಟನಾಗಿ ದೈವದ ಹಂಗಿಲ್ಲ. ಸತ್ಯಜ್ಞಾನಾನಂದವೆ ತಾನಾಗಿ ಇನ್ನಾರ ಹಂಗಿಲ್ಲ. ಇನ್ನಾರ ಹಂಗಿಲ್ಲದಾತ ಗುಹೇಶ್ವರಲ್ಲಯ್ಯನೊಬ್ಬನೆ ! ೧೬೫೧ ಪುಣ್ಯವುಳ್ಳ ಕಾಲಕ್ಕೆ ಮಣ್ಣು ಹೊನ್ನಪ್ಪುದು, ಪುಣ್ಯವುಳ್ಳ ಕಾಲಕ್ಕೆ ಪಾಷಾಣ ಪರುಷವಪ್ಪುದು ನೋಡಾ. ಮುನ್ನ ಮುನ್ನವೆ, ಅಚ್ಚದ ಭಾಗ್ಯ ಎನ್ನ ಕಣ್ಣ ಮುಂದೆ ಕಾಣಬಂದಿತ್ತು ನೋಡಾ ! ಮಣ್ಣ ಮರೆಯ ದೇಗುಲದೊಳಗೊಂದು ಮಾಣಿಕ್ಯವ ಕಂಡಬಳಿಕ, ಇನ್ನು ಮುನ್ನಿನಂತಪ್ಪುದೆ ಗುಹೇಶ್ವರಾ ? ೧೯೫೨ ಪೂಜಿಸಿ ಕಳಯಿಂಕಿಳುಹಲದೇನೋ ? ಅನಾಹತ ಪೂಜೆಯ ಮಾಡಲದೇನೋ ? ದೇಹವೆ ಪೀಠಿಕೆ, ಜೀವವೆ ಲಿಂಗ ಗುಹೇಶ್ವರಾ. ೧೬೫೩ ಪೂಜೆಯಾಯಿತ್ತದೇನೋ ? ಪೂಜೆಯ ಮೇಲೆ ಸಿಂಹಾಸನವಿದೇನೊ ? ಧೂಪ ದೀಪ ನಿವಾಳಿ ಇದೇನೊ ? ತಳದಲ್ಲಿ ಜ್ಯೋತಿ ಮೇಲೆ ಪ್ರಣತೆ ! ಕಳಸದ ಮೇಲಣ ನೆಲಗಟ್ಟು ಕಂಡು ನೋಡಿ ಬೆರಗಾದೆ ಗುಹೇಶ್ವರಾ! ೧೯೫೪ ಪೂರ್ವಗುಣವನೆಲ್ಲ ಅಳಿದು ಪುನರ್ಜಾತನಾದ ಬಳಿಕ ಗುರುವಿನ ಕರಸ್ಥಲದಲ್ಲಿ ಉತ್ಪತ್ತಿ ಸದ್ಭಕ್ತರಲ್ಲಿ ಸ್ಥಿತಿ ಲಿಂಗದಲ್ಲಿ ಲಯ ಇಂತೀ ನಿರ್ಣಯವನರಿಯದೆ; ಶೀಲವಂತರ ಶೀಲ ತಪ್ಪಿದಡೆ ಹೇಳಬಹುದೆ ? ಹೇಳಬಾರದು. ೩೯೯ ೧೬೫೬೧ ೬೫೭1 112 2011 ೬೫೯