ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೦೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

ಅತಿಮಾನುಷ ಕಥೆಗಳು

೭೫

"ನಾನು ಮಾಡಿದ ಪ್ರತಿಜ್ಞೆ ಬಿಂಬಾಲಿಗೆ ಗೊತ್ತಿದೆ. ಆದ್ದರಿಂದ ಆಕೆ ನನ್ನನ್ನು ಮದುವೆಯಾಗಲು ಸಿದ್ಧಳಾಗಬೇಕು.?

"ಏನೂ ಅರಿಯದ ಹುಡಿಗೆ. ಹೂಗಳಾಶೆಯಿ೦ದ ಎರಡು ಹೂ ಕೊಯ್ದರೆ, ತಂಗಿಯನ್ನು ಮದುವೆ ಆಗುವೆಯಾ ? ಏನಾದರೂ ಮಾತಾಡಬೇಡ" ಎಂದು ತಾಯಿ ತಿಳಿಹೇಳಿದಳು.

ತಿಮ್ಮಣ್ಣ ಬಿ೦ಬಾಲಿಯ ಬಳಿಗೆ ಹೋಗಿ ಆಕೆ ಬಾಚಿಕೊಳ್ಳುವಾಗ ಉದುರಿದ ಕೂದಲನ್ನೆತ್ತಿ ನೋಡಿದರೆ ಹೊಳೆಯಲ್ಲಿ ಸಿಕ್ಕ ಕೂದಲು ಈಕೆಯದೇ ಎಂದು ಮನವರಿಕೆಯಾಯಿತು. "ಅವಳೇ ತನ್ನ ಹೆಂಡತಿಯಾಗಬೇಕೆಂಬ ದೇವಸಂಕಲ್ಪವಿದೆ? ಎಂದು ಬಗೆದು, ತನ್ನ ಕೋಣೆಗೆ ಹೋಗಿ ಮುಸುಕೆಳೆದುಕೊಂಡು ಮಲಗಿದನು. ಊಟಕ್ಕೆ ಬರಲಿಲ್ಲವೆಂದು ತಾಯಿ ಹೋಗಿ ಆತನ ಮುಸುಕೆತ್ತಿ ಅವನನ್ನು ಊಟಕ್ಕೆ ಕರೆದಳು.

"ಅವ್ವಾ ನನ್ನ ಎರಡು ಪ್ರತಿಜ್ಞೆಗಳು ಪೂರಯಿಸಬೇಕಾದರೆ, ನಾನು ತಂಗಿಯನ್ನು ಮದುವೆಯಾಗಲೇಬೇಕು ಅವಳೊಡನೆ ನೀನು ನನ್ನ ಮದುವೆಮಾಡುವವರೆಗೆ ನಾನು ಬಾಯಲ್ಲಿ ತುಕ್ತಿಡುವುದಿಲ್ಲ. ಕೈಯಲ್ಲಿ ಕೆಲಸ ಗೈಂಯ್ಯುವುದಿಲ್ಲ. ಜೀವವಿಟ್ಟುಕೊಳ್ಳುವದಿಲ್ಲ" ಎಂದಾಗ. ಅವನ ತಂದೆ ಬಂದು ಬುದ್ಧಿ ಹೇಳಿದನು. ಕೇಳಲಿಲ್ಲ.

ತಾಯಿತಂದೆಗಳು ವಿಚಾರಿಸಿ ಒಂದು ನಿರ್ಧಾರಕ್ಕೆ ಬಂದರು. "ಇದ್ದೊಬ್ಬ ಮಗ ನಮ್ಮ ಕಣ್ಣ ಮುಂದೆ ಬದುಕಿದರೆ ಸಾಕು. ತಂಗಿಯು ಸಂಗಡವೇ ಮದುವೆ ಮಾಡಿದರಾಯಿತು?” ಎಂದು ಹಂದರು ಹಸಿಜಗಲಿ ಹಾಕಿದರು. ಮದುವೆಯ ಸಲಕರಣೆಗಳನ್ನು ಅಣಿಗೊಳಿಸಿದರು. ಅಡಿಗೆಯ ಸಿದ್ಧತೆ ನಡೆಯಿತು.

"ಬಿಂಬಾಲೀ, ಈ ಅಕ್ಕಿ ತೊಳೆದುಕೊಂಡು ಬಾ" ಎಂದು ತಾಯಿ ಹೇಳಲು, ಆಕೆ ಅಕ್ಕಿಯ ಬುಟ್ಟಿಂಪನ್ನೆತ್ತಿಕೊಂಡು ಬಾವಿಯ ಕಟ್ಟೆಗೆ ಹೋದಳು. ಅಲ್ಲಿ ಕುಳಿತ ಕಾಗೆ — "ಬಿ೦ಬಾಲೀಬಿಂಬಾಲೀ, ನನಗೆರಡು ಕಾಳು ಒಗೆ. ನಾನೊಂದು ಕತೆ ಹೇಳುತ್ತೇನೆ" ಎನ್ನಲು ಬಿಂಬಾಲಿ ಒಗೆದ ಹಿಡಿ ಅಕ್ಕಿಕಾಳು ತಿಂದು ಕಾಗೆ ಕೇಳಿತು — "ಬಿಂಬಾಲಿ, ನೀನು ನಿನ್ನಣ್ಣನನ್ನು ಮದುವೆ ಆಗುವೆಯಾ ?" ಬಿಂಬಾಲಿಗೆ ಸಿಟ್ಟು ಬಂತು. ಅವ್ಡನ ಬಳಿಗೆ ಹೇಗಿ ಕಾಗೆಯ ಬಗ್ಗೆ ದೂರು ಹೇಳಿದಳು. "ಕಾಗೆ ಸಾಯಲಿ. ಅದು ಹಾಗೇ ಅ೦ದುಕೊಳ್ಳಲೊಲ್ಲದೇಕೆ ಸುಮ್ಮನಿರು" ಎಂದಳು ತಾಯಿ.