ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೦೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

೭೬

ಜನಪದ ಕಥೆಗಳು

ಅಡಿಗೆ ಮನೆಗೆ ಹೋಗಿ ಬಿಂಬಾಲಿ ತೆಂಗು ಒಡೆದು ಹಸಿಕೊಬ್ಬರಿಯನ್ನು ಹೆರೆಸತೊಡಗಿದಳು. ಅತ್ತಿಂದ ಒಂದು ಬೆಕ್ಕು ಬಂದು—"ಬಿಂಬಾಲೀ, ನನಗಿಷ್ಟು ಹೆರೆಕೊಬ್ಬರಿ ಕೊಡು. ನಾನೊಂದು ಕಥೆ ಹೇಳುತ್ತೇನೆಂದು" ಅನ್ನಲು, ಕೊಟ್ಟ ಹೆರೆ ಕೊಬ್ಬರಿ ತಿಂದು—"ಬಿಂಬಾಲೀ, ನೀನು ನಿನ್ನಣ್ಣನನ್ನೇ ಮಡುವೆಯಾಗುವೆಯಾ?" ಎಂದು ಕೇಳಿತು. ಬಿಂಬಾಲಿಗೆ ಸಿಟ್ಟುಬಂತು ಅವ್ವನ ಬಳಿಗೆ ಹೋಗಿ ಬೆಕ್ಕಿನ ಬಗ್ಗೆ ದೂರು ಹೇಳಿದಳು. "ಬೆಕ್ಕು ಸಾಯಲಿ. ಅದು ಹಾಗೇ ಅಂದುಕೊಳ್ಳಲೊಲ್ಲದೇಕೆ. ಸುಮ್ಮನಿರು?" ಎಂದಳು ತಾಯಿ.

ಅಡಿಗೆ-ಅಂಬಲಿ ಆಯಿತು. ಜಳಕಕ್ಕೆ ನೀರು ಕಾಯ್ದವು. ಒಬ್ಬ ಭಿಕ್ಷುಕಿ ಬಂದು—"ಬಿಂಬಾಲೀ, ಮುಷ್ಟಿ ಕಾಳು ಭಿಕ್ಷೆ ಹಾಕು. ನಾನೊಂದು ಕಥೆ ಹೇಳುತ್ತೇನೆ" ಅನ್ನಲು, ಬಿಂಬಾಲಿ ಅವಳಿಗೆ ಹಿಡಿ ಅಕ್ಕಿ ಹಾಕಲು ಆ ಭಿಕ್ಷುಕಿ ಕೇಳಿದಳು—"ಬಿಂಬಾಲೀ, ನಾನೊಂದು ಸುದ್ದಿ ಕೇಳಿದ್ದೇನೆ. ನೀನು ನಿನ್ನಣ್ಣನನ್ನೇ ಮದುವೆಯಾಗುವೆಂಖಾ? ಬಿಂಬಾಲಿಗೆ ತಲೆಕೀಸರಿಟ್ಟು ಅವ್ವನ ಬಳಿಗೆ ಹೋಗಿ, ಭಿಕ್ಷುಕಿಯ ಬಗ್ಗೆ ದೂರು ಹೇಳಿದಳು. "ಮುದುಕಿಸಾಯಲಿ, ಅಂದುಕೊಳ್ಳುವವರು ಅಂದುಕೊಳ್ಳಲಿ. ನೀನು ಸುಮ್ಮನಿರು?" ಎಂದಳು ತಾಯಿ.

ಮನೆಯ ಮುಂದೆ ಹಾಕಿದ ಹಂದರ, ಹಸೆ ಜಗಲಿ, ಅಡಿಗೆ-ಜಿಡಿಗೆ ಇವುಗಳನ್ನೆಲ್ಲ ಕಂಡು ಬಿಂಬಾಲಿಗೆ ಅರ್ಥವಾಯಿತು. ಮುಡಿಕಟ್ಟಿಕೊಂಡಳು. ಗೊಂಡೆ ಹೂವಿನ ದಂಡೆಂಹನ್ನು ಮುಡಿದುಕೊಂಡಳು. ಯಾರಿಗೂ ತಿಳಿಯದಂತೆ ಮನೆಯಿಂದ ಹೊರ ಬಿದ್ದು ದೂರದಲ್ಲಿರುವ ಒಂದು ಅಶ್ವತ್ಥವೃಕ್ಷವನ್ನೇರಿ ಕುಳಿತುಬಿಟ್ಟಳು.

ಬಿಂಬಾಲಿಯ ಮದುವೆಮಾಡಿಸಲು ಭಟ್ಟರು ಬಂದರು. ವಿಧಿವಿಧಾನಗಳು ಮೊದಲಾದಪ್ಪ. ಹೆಣ್ಣನ್ನು ಸಿಂಗರಿಸಿಕೊಂಡು ಹೊರತರಬೇಕೆಂದರೆ ಬಿಂಬಾಲಿಯೆಲ್ಲಿ? ಮನೆ ಹಿತ್ತಿಲ ಮೊದಲುಮಾಡಿ, ಊರ ಕೆರೆ ಬಾವಿ ಹುಡುಕಲು ಜನರನ್ನು ಕಳಿಸಿದರು.

ಅಶ್ಚತ್ಯಮರದ ನೆರಳಲ್ಲಿ ಕುಳಿತ ತಿರುಪೆಯವನನ್ನು ನೋಡದೆ, ಬಿಂಬಾಲಿ ಮರದ ಮೇಲಿಂದಲೇ ಹಿಚಕ್ಕನೆ ಉಗುಳಿದಳು. ಅದು ಅವನ ಮೈಮೇಲೆ ಬೀಳಲು ಮುಖವೆತ್ತಿ—"ಮೋಡವಿಲ್ಲ ಮುಗಿಲಿಲ್ಲ ನೀರೆಲ್ಲಿಯದು ?" ಎಂದು ಮೇಲೆ ನೋಡುವಷ್ಟರಲ್ಲಿ ಬಿಂಬಾಲಿ ಕಾಣಿಸಿದಳು. ಬಿಂಬಾಲಿಯ ಮನೆಯವರು ಆಕೆಂಯನ್ನು ಹುಡುಕುತ್ತಿದ್ದುದೂ, ಆಕೆಯ ಮದುವೆಯ ಸಿದ್ಧತೆ ನಡೆದದ್ದೂ ಅವನಿಗೆ ತಿಳಿದಿತ್ತು. ಆಕೆ ತನ್ನ ಮೇಲೆ ಉಗುಳಿದಳೆಂಬ ಸಿಟ್ಟಿನಿಂದ ಅವಳ