ಅತ್ತೆಯ ಹೊಟ್ಟೆ ಉರಿಯುತ್ತಿತ್ತು. ಸೊಸೆಯ ಮೇಲೆ ಸಿಟ್ಟು ಬೆಂಕಿಯಾದಳು. "ಈಕೆಯನ್ನು ಜೀವಸಹಿತ ಸುಟ್ಟು ಬರೋಣ?” ಎಂದು ತೀರ್ಮಾನ ಹೇಳಿದ್ದಕ್ಕೆ ಮಗನು ಸಮ್ಮತಿಸಿದನು.
ಗಾಡಿಯಲ್ಲಿ ಕುಳ್ಳುಕಟ್ಟಿಗೆ ಹೇರಿಕೊಂಡು ಮಗಸೊಸೆಯರೊಂದಿಗೆ ಸುಡುಗಾಡಿಗೆ ಹೋದಳು. ಅಲ್ಲಿ ಸೊಸೆಯನ್ನು ಕುಳ್ಳಿರಿಸಿ, ಕುಳ್ಳುಕಟ್ಟಿಗೆ ಒಟ್ಟಿ ಬೆಂಕಿ ಹಚ್ಚಬೇಕೆಂದರೆ, ಕಡ್ಡಿ ಪೆಟ್ಟಿಗೆಯನ್ನು ಮನೆಯಲ್ಲಿಯೇ ಮರೆತು ಬಂದಿದ್ದರು. ಮನೆಗೆ ಹೋಗಿ ಕಡ್ಡಿಪೆಟ್ಟಿಗೆ ತರಲು ಮಗನಿಗೆ ಹೇಳಿದರೆ ಆತನು ಒಲ್ಲೆನೆಂದನು. ತಾಯಿಂಯೀ ಅವಸರದಿಂದ ಮನೆಯತ್ತ ಧಾವಿಸಿದಳು.
ಹೆಂಡತಿಯ ಸಲುವಾಗಿ ಕರುಣೆ ಬಂದು, ಆಕೆಯನ್ನು ಬದುಕಿಸಿಕೊಳ್ಳುವ ಎತ್ತುಗಡೆ ನಡೆಸಿದನು ಗಂಡ. ಅವ್ವನು ಮನೆಯಿಂದ ಬರುವಷ್ಟರಲ್ಲಿ ಹೆಂಡತಿಯನ್ನು ಕುಳ್ಳಿನ ತಾಳಿಯೊಳಗಿಂದ ಕಡೆಗೆ ತೆಗೆದು, ಅಲ್ಲಿ ಒಂದು ಕಲ್ಲು ಇಟ್ಟು ಕುಳ್ಳು ಕಟ್ಟಿಗೆ ಒಟ್ಟಿದನು. ಒಂದು ಗಿಡವನ್ನೇರಿ ಕುಳಿತುಕೊಳ್ಳಲು ಹೆಂಡತಿಗೆ ಹೇಳಿದನು.
ಅಂದು ಕಳ್ಳರು ಊರಲ್ಲಿ ಕಳವುಮಾಡಿಕೊಂಡು, ಸುಡುಗಾಡಿನ ಬಳಿಯಲ್ಲಿರುವ ಮರದ ಕೆಳಗೆ ಹಂಚುಪಾಲು ಮಾಡಿಕೊಳ್ಳಲು ಅಣಿಯಾದರು. ಅವರನ್ನು ಕಂಡು ಮರದ ಮೇಲೆ ಕುಳಿತ ಹೆಣ್ಣುಮಗಳು ಅಂಜಿ ಚೆಟ್ಟನೆ ಚೀರಿದಳು. ಅದನ್ನು ಕೇಳಿ ಕಳ್ಳರು ಮರದಲ್ಲಿ ಪಿಶಾಚಿಯಿದ್ದಂತೆ ತೋರುತ್ತದೆ. ತಮ್ಮನ್ನೆಲ್ಲಾದರೂ ನುಂಗೀತೆಂದು ಎಲ್ಲವನ್ನೂ ಬಿಟ್ಟು ಓಡಿಹೋದರು.
ಸೊಸೆಯು ಎದೆಗಟ್ಟಿಮಾಡಿ ಕೆಳಗಿಳಿದು ನೋಡಿದರೆ ರೂಪಾಯಿ ಸುರಿದಿವೆ. ಬೆಳ್ಳಿ ಬಂಗಾರ ಚೆಲ್ಲಾಡಿದೆ. ಅವನ್ನೆಲ್ಲ ಕಟ್ಟಿಕೊಂಡರೆ ದೊಡ್ಡ ಗಂಟೇ ಆಯಿತು. ದಣಿದಣಿ ಎತ್ತಿ ತಲೆಯ ಮೇಲೆ ಹೊತ್ತುಕೊಂಡು ಮನೆಯ ಹಾದಿ ಹಿಡಿದಳು.
"ಅತ್ತೇ, ಬಾಗಿಲು ತೆರೆ" ಎಂದು ಕೂಗಿದಳು.
ಸೊಸೆಯ ದನಿಯನ್ನು ಗುರುತಿಸಿ "ಇಂದೇ ಸುಟ್ಟು ಬಂದರೆ ಪಿಶಾಚಿಯಾಗಿ ಬೆನ್ನ ಹಿಂದೆಯೇ ಬರಬೇಕೆ? ಬಾಗಿಲ ತೆರೆಯುವುದೇ ಬೇಡ" ಎಂದು ಡುಕ್ಕು ಹೊಡೆದಳು ಅತ್ತೆ.
"ಒಜ್ಜೆಯಾಗಿದೆ ಅತ್ತೇ. ಆ ಲೋಕದಲ್ಲಿದ್ದ ಮಾವನವರು ಇದನ್ನೆಲ್ಲ ಕಳಿಸಿದ್ದಾರೆ. ಜನರು ನೋಡಿಗೀಡಿದರೆ ನಮ್ಮ ಗತಿ ಏನಾದೀತು? ದ್ರವ್ಯ, ಬೆಳ್ಳಿ ಬಂಗಾರ ತಂದಿದ್ದೇನೆ. ಅತ್ತೆ ಹೆದರಬೇಡ. ಬಾಗಿಲು ತೆರೆ" ಎಂದಳು ಸೊಸೆ.
ಅತ್ತೆ ಮೆಲ್ಲಗೆ ಜಾಗಿಲು ತೆಗೆದು ನೋಡಿದಳು. ಬಂದವಳು ಸೊಸೆಯೆ ಆಗಿದ್ದಾಳೆ. ಪಿಶಾಚಿಗಿಶಾಚಿಯಂತೆ ತೋರಲಿಲ್ಲ. ಬಾಗಿಲು ತೆರೆದು ಒಳಗೆ