ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೧೮

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
೯೧
ಅಳಿಯನ ಅರ್ಹತೆ

ಜೀನಹಂಕನಾದ ಶ್ರೀಮಂತನಿಗೆ ಒಬ್ಬಳೇ ಮಗಳಿದ್ದಳು. ಅವನು ಯುಕ್ತಿಪರಿಯುಕ್ತಿಗಳಿಂದ ಸಾಕಷ್ಟು ಗಳಿಸಿದ್ದನು. ಹಾಗೂ ಜಿಪುಣತನದಿಂದ ಖರ್ಚುಮಾಡಿ ಬೇಕಾದಷ್ಟು ಉಳಿಸಿದ್ದನು. ತಾನು ಸಂಗ್ರಹಿಸಿದ ಆಸ್ಮಿಯನ್ನೆಲ್ಲ ಕಾಯ್ದುಕೊಂಡು ಹೋಗಬಲ್ಲ ವರ ಸಿಕ್ಕರೆ, ಅವನನ್ನು ಅಳಿಂಪುತನಕ್ಕೆ ಇಟ್ಟುಕೊಳ್ಳಬೇಕೆಂದು ನಿರ್ಣಯಿಸಿದ್ದನು.

ಅದೆಷ್ಟೋ ಜನ ವರಗಳು ಬಂದು ಬಂದು ಹೋದವು. ಆದರೆ ಶ್ರೀಮಂತ ಮಾವನಿಗೆ ಅವರಾರಲ್ಲಿಯೂ ಅರ್ಹತೆ ಕಂಡುಬರಲಿಲ್ಲ. ಆದರೆ ಬಕ್ಕಣಗಿ ಎಂಬ ಹಳ್ಳಿಯಲ್ಲಿ ಅದೇ ಗೋತ್ರದ ಒಂದು ಮನೆತನವಿತ್ತು. ಅಲ್ಲಿ ಇಬ್ಬರು ಅಣ್ಣತಮೃಂದಿರಿದ್ದರು. ಅವರಿಗಿನ್ನೂ ಮದಿವೆಯಾಗಿರಲಿಲ್ಲ. ಆ ಶ್ರೀಮಂತ ಮನೆತನಕ್ಕೆ ಅಳಿಂಯನಾಗಿ ನಿಲ್ಲಲು ಅರ್ಹನಾದ ಒಬ್ಬ ವರ ಬೇಕಾಗಿದ್ದಾನೆಂಬ ಸಂಗತಿ ತಿಳಿಯಿತು. ಅವರ ತಂದಿಯು ಮಕ್ಕಳಿಬ್ಬರನ್ನೂ ಕರೆದು — "ನೀವಿಬ್ಬರೂ ಹೋಗಿ ನಿಮ್ಮ ನಿಮ್ಮ ಬುದ್ಧಿವಂತಿಕೆ ತೋರಿಸಿ, ಇಬ್ಬರಲ್ಲಿ ಒಬ್ಬರು ಅಳಿಯತನಕ್ಕೆ ನಿಂತರೆ ಒಳ್ಳೆಯದಾಗುತ್ತದೆ" ಎಂದು ಹೇಳಿದನು.

ತಂದೆಯ ಸೂಚನೆಯಂತೆ ಅವರಿಬ್ಬರೂ ಆ ಶ್ರೀಮಂತನ ಊರಿಗೆ ಹೋಗಿ ಅವನನ್ನು ಭೆಟ್ಟಿಯಾದರು. ಅವನು ಒಬ್ಬೊಬ್ಬರನ್ನು ಪರಭಾರೆ ಕರೆದೊಂಯ್ದು ಅವರ ಅರ್ಹತೆಂಯನ್ನು ಪರೀಕ್ಷಿಸತೊಡಗಿದನು.

"ಇದ್ದ ಆಸ್ತಿಯನ್ನು ಉಳಿಸುವುದಕ್ಕೂ ಬೆಳೆಸುವುದಕ್ಕೂ ನೀನಾವ ಬುದ್ಧಿವಂತಿಕೆಯಿಂದ ಸಂಸಾರ ಮಾಡುತ್ತೀ" ಎಂದು ಕೇಳಿದನು.

ಹಿರಿಯವನು ತನ್ನ ಅರ್ಹತೆಂಯನ್ನು ವಿವರಿಸುತ್ತಾನೆ — "ನನಗೆ ದಿನಕ್ಕೆ ಒ೦ದು ರೊಟ್ಟಿಂಯಾದರೆ ಸಾಕು. ಅದನ್ನು ತಿಂದು ತಂಬಿಗೆ ನೀರು ಕುಡಿದು ಒ೦ದು ದಿನ ಕಳೆಯುತ್ತೇನೆ.” ಆ ಮಾತು ಕೇಳಿ ಶ್ರೀಮಂತನು ಮನಸ್ಸಿನಲ್ಲಿ "ಅಬಬಬಾ ! ಅಂದುಕೊಂಡು — "ಅಡ್ಡಿಯಿಲ್ಲ, ನಿನ್ನ ತಮ್ಮನನ್ನು ಒಳಗೆ ಕಳಿಸಿಕೊಡು" ಎ೦ದು ಹಿರಿಯ ವರನಿಗೆ ಹೇಳಿದನು.