ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೨೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ವಾಸ್ತವಿಕ ಕಥೆಗಳು

ಆ ಅಕ್ಕತಂಗಿಯರ ಅಕ್ಕರೆಯ ಸಂದರ್ಶನವನ್ನು ಕಂಡು ಗಂಡನು ಮೂಕವಿಸ್ಮಿತನಾದನು. ತನ್ನ ಹೆಂಡತಿ ಹೇಳಿದ್ದರಲ್ಲಿ ಎಷ್ಟೂ ಅವಾಸ್ತವವಿಲ್ಲ ಎಂದು ಮನಗಂಡನು.

ತೋಟದೊಡತಿಯು ಪ್ರವಾಸಿಕರಾಗಿ ಬಂದ ಆ ದಂಪತಿಗಳ ಬುತ್ತಿಗಂಟು ಬಿಚ್ಚಗೊಡದೆ ಕರೆದೊಯ್ದಳು. ತಂಗಿಯನ್ನು ಎರಡು ದಿನ ತನ್ನಲ್ಲಿಟ್ಟುಕೊಂಡು ಅಕ್ಕನು ವಿಧವಿಧದ ಪಕ್ವಾನ್ನಗಳನ್ನುಣಿಸಿ, ರೇಶಿಮೆ — ಜರತಾರಿಂಥ ಸೀರೆ ಕುಪ್ಪಸಗಳ ಉಡುಗೊರೆಯನ್ನು ಮಾಡಿ, ಎತ್ತಿನ ಬಂಡಿಯಲ್ಲಿ ಕುಳ್ಳಿರಿಸಿ ಆಕೆಯ ಊರಿಗೆ ಕಳಿಸಿದಳು.

ಗಂಡನ ಸಂಶಯವು ದೂರವಾಗಿದ್ದರಿಂದ ಅವರಿಬ್ಬರೂ ಮೊದಲಿಗಿಂತ ಹೆಚ್ಚು ಸುಖದಿಂದ ಬಾಳ್ವೆಮಾಡತೊಡಗಿದರು.

 •