ತಂದೆ ಮಗ
ಸನಗಿನ ವ್ಯಾಪಾರಮಾಡುವುದರಲ್ಲಿಯೇ ಮುದುಕನಾದ ಶಿವಲಿಂಗಪ್ಪನು, ಕೈಗೆ ಬಂದ ಮಗನಿಗೆ ತನ್ನ ವ್ಯಾಪಾರದ ಹಾಗು ತನ್ನ ಗಿರಾಕಿಗಳ ಪರಿಚಯ ಮಾಡಿಸಿಕೊಟ್ಟರೆ ತಾನು ಕೆಲಸದಿಂದ ನಿವೃತ್ತನಾಗುವುದಕ್ಕೆ ನಿಶ್ಚಿಂತವಾಗುವುದೆಂದು ಆಲೋಚಿಸಿ, ಮಗನನ್ನು ಕರೆದು ತನ್ನ ವಿಚಾರವನ್ನು ಆತನ ಮುಂದೆ ವಿವರಿಸಿದನು. ಮಗನೂ ಅದಕ್ಕೆ ಸಮ್ಮತಿಸಿದನು.
ಕುದುರೆಯ ಮೇಲೆ ಸೀರೆಯ ಗಂಟುಗಳನ್ನು ಹೇರಿ, ನಾಲ್ಕು ದಿನ ಸಾಕಾಗುವಷ್ಟು ರೊಟ್ಟಿ — ಬುತ್ತಿ ಕಟ್ಟಿಕೊಂಡು ತಂದೆಯು ಮಗನೊಂದಿಗೆ ವ್ಯಾಪಾರಕ್ಕೆಂದು ತನ್ನ ದೂರದ ಹಳ್ಳಿಗಳತ್ತ ಹೊರಟನು. ಸರತಿ ಪ್ರಕಾರ ತಂದೆಮಗ ಕುದುರೆ ಹತ್ತುತ್ತಿದ್ದರು. ಕುದುರೆ ತನ್ನದೇ ಆದ ವೇಗದಲ್ಲಿ ಸಾಗಬಹುದಾದರೂ ಅದರ ಬೆನ್ನ ಹಿಂದೆ ನಡೆಯುತ್ತ ಹೊರಟವರ ಸಲುವಾಗಿ ಮಂದವೇಗದಿಂದ ನಡೆಯಿತು. ಆ ಕಾರಣದಿಂದ ಅವರು ತಲಪಬೇಕಾದ ಹಳ್ಳಿಂಪನ್ನು ಸಾಯಂಕಾಲದೊಳಗಾಗಿ ತಲುಪಲು ಸಾಧ್ಯವಾಗಲಿಲ್ಲ. ಆ ಹಳ್ಳಿ ಇನ್ನೂ ಎರಡು ಹರದಾರಿ ದೂರವಿರುವಾಗಲೇ ಹೊತ್ತು ಮುಳುಗಿ ದೀಪಹಚ್ಚುವ ವೇಳೆಯಾಯಿತು. ತುಸು ರಾತ್ರಿಯಾದರೂ ಚಿಂತೆಯಿಲ್ಲ, ಹೋಗಿಯೇ ಬಿಡೋಣ ಎಂದು ಮಗ, ಇದೇ ಹಳ್ಳಿಂಯಲ್ಲಿ ರಾತ್ರಿ ಕಳೆದು ಮುಂಜಾನೆ ಹೋಗೋಣ ಎಂದು ತಂದೆ ಯೋಚಿಸತೊಡಗಿದನು.
ಮಗ ಕುದುರೆಯ ಮೇಲೆ ಕುಳಿತಿದ್ದಾನೆ. ತಂದೆ ನಡುವಿಗೆ ಒಲ್ಲಿಸುತ್ತಿ ಹಿಂದೆ ನಡೆದಿದ್ದಾನೆ. ಮು೦ದಿನ ಊರ ಹಾದಿ ಹಿಡಿದ ಕುದುರೆಯನ್ನು ಹೊರಳಿಸಿ ಊರ ಅಗಸೆಯತ್ತ ಕರೆದೊಯ್ಯಲು ತಂದೆ ಲಗಾಮು ಹಿಡಿದಿದ್ದಾನೆ. ಮೇಲೆ ಕುಳಿತವನು ಮುಂದಿನ ದಾರಿ ಹಿಡಿಯಲು ತವಕಿಸುತ್ತಿದ್ದಾನೆ. ಆ ಹಳ್ಳಿಂಕು ಅಗಸೆಯ ಮುಂದೆ ತಂದೆ ಮಕ್ಕಳಲ್ಲಿ ಜಗ್ಗಾಟವೇ ನಡೆಯಿತು. "ನಿನಗೆ ತಿಳಿಯುವದಿಲ್ಲ. ನಾನು ಹೇಳಿದಂತೆ ಕೇಳು". ಎಂಬುದೇ ಅವರಿಬ್ಬರ ಕಟ್ಟಾಜ್ಞೆಯಾಯಿತು. ಆ ಗಲವಿಲಿಗೆ ಹತ್ತೆಂಟುಜನ ನೆರೆಯಿತು ಅವರಲ್ಲೊಬ್ಬ ಕೇಳಿದರು -