ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೨೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

೯೮

ಜನಪದ ಕಥೆಗಳು


"ನೀವು ಒಬ್ಬರಿಗೊಬ್ಬರು ಏನಾಗಬೇಕು?"

"ತಂದೆ-ಮಗ" ಎಂದು ಮುದುಕನು ಹೇಳಿದನು.

"ಸುಳ್ಳು. ನಾನು ಮಾಲಿಕ, ಆತ ಗುಮಾಸ್ತೆ" ಎಂದವನು ಮಗ.

"ಆ ಹುಡುಗನದೇನು ಕೇಳುವಿರಿ ? ನಾವು ತಂದೆ ಮಕ್ಕಳು?"

"ಆ ಮುದುಕನದೇನು ಕೇಳುವಿರಿ? ನಾವು ಮಾಲಿಕ — ಗುಮಾಸ್ತೆ?

"ಮಗನಾದವನು ತಂದೆಯ ಮಾತು ಕೇಳಬೇಕಲ್ಲವೇ ?” ಎಂಬುದು ಮುದುಕನ ವಾದ.

"ಗುಮಾಸ್ತನಾದವನು ಮಾಲಿಕನು ಹೇಳಿದಂತೆ ನಡೆಯಬೇಕಲ್ಲವೇ?" ಎಂಬುದು ಮಗನ ಪ್ರತಿವಾದ".

ಹಗ್ಗವೂ ಹರಿಯದೆ ಕೋಲೂ ಮುರಿಯದೆ ವಾದವಿವಾದವು ಸಾಗಿದ ಬಳಿಕ ಊರವರು ಅವರ ಕುದುರೆಯನ್ನು ಜಗ್ಗಿಕೊ೦ಡು ಚಾವಡಿಗೊಯ್ದರು. ಗೌಡನು ಅವರ ವಾದ-ಪ್ರಶಿವಾದಗಳನ್ನು ಕೇಳಿ, ಮು೦ದಿನ ಯೋಚನೆ ಹೇಳಿದನು — "ನೀವು ತಂದೆಮಕ್ಕಳೋ ಮಾಲಿಕ ಗುಮಾಸ್ತರೋ ಸ್ಪಷ್ಟವಾಗುವವರೆಗೆ ನಿಮ್ಮನ್ನು ಇಲ್ಲಿಂದ ಬಿಡುವುದೇ ಇಲ್ಲ. ನಿಮ್ಮೂರಿನ ಗ್ರಾಮಸ್ಥರಿಂದ ನಿಮ್ಮ ಹತ್ತಗಡೆಯ ವಿಷಯವನ್ನು ತರಿಸಿಕೊಡಿರಿ."

ಮರುದಿನ ಗೌಡನು ಓಲೆಕಾರನನ್ನು ಅವರೂರಿಗೆ ಕಳಿಸಿ ಅವರ ವಿಷಯವನ್ನು ತರಿಸಿಕೊಂಡರೆ ತಂದೆ-ಮಗ ಎನ್ನುವುದು ತಿಳಿಯಿತು. ಶಿವಲಿಂಗಪ್ಪನಿಂದ ಓಲೆಕಾರನಿಗೆ ಎರಡು ರೂಪಾಯಿ ಕೊಡಿಸಿ, ಮಗನಿಗೆ ಬುದ್ಧಿಹೇಳಿ ಅವರನ್ನು ಮುಂದಿನೂರಿಗೆ ಹೋಗಗೊಟ್ಟನು.

 •