ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೨೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೧೦೨
ಜನಪದ ಕಥೆಗಳು

ಸವರು," "ಅನ್ನಕ್ಕೆ ಮೊಸರು ಕಲೆಸು" ಎನ್ನುತ್ತ ಅಜ್ಜಿಯನ್ನು ಜಗ್ಗಾಡಿ ಎಬ್ಬಿಸಿದವು. ಆಕೆಯ ಸೆರಗು ಒಂದು ಹಿಡಿದಿದೆ, ಕೈ ಮತ್ತೊಂದು ಹಿಡಿದಿದೆ. ಹಿಂದೆ ನೂಕುವುದು ಒಂದು, ಮುಂದೆ ಎಳೆಯುವುದು ಬೇರೊಂದು. ಎಲ್ಲ ಕೂಡಿ ಅಜ್ಜಿಯನ್ನು ಅಡಿಗೆ ಮನೆಗೆ ಕರೆದೊಯ್ದವು.

"ನಂಗೂ ಅಜ್ಜಿ, ಉಪ್ಪಿನಕಾಯಿ" ಎಂದು ತೊದಲತ್ತ ಇನ್ನೊಂದು ಕೂಸು ತಪ್ಪುಹೆಜ್ಜೆ ಹಾಕುತ್ತ ಅಜ್ಜಿಯ ಬಳಿಗೆ ಬಂದಿತು. "ಇದಾವ ಹೊಸದನಿ" ಎಂದು ಅಜ್ಜಿ ನೋಡಿದರೆ, ಕಡಲೆ ಹಿಟ್ಟಿನ ಗೊಂಬೆ, ಜೀವತಳೆದು ಎದ್ಧು ಬಂದಿದೆ! ಅಶ್ಛರ್ಯವೆನಿಸಿತು ಅಜ್ಜಿಗೆ.

"ಗೊಂಬೆಯ ಹೆಣವನ್ನು ಮುಂದಿರಿಸಿಕೊಂಡು ಅತ್ತು ಕಣ್ಣೀರು ಸುರಿದು ಮನಸ್ಸು ಹಗುರಮಾಡಿಕೊಳ್ಳಬೇಕೆಂದರೆ ಹಿಟ್ಟಿನ ಗೊಂಬೆಯೂ ಜೀವಂತವಾಗಬೇಕೆ? ಅಳುವುದು ನನ್ನ ದೈವದಲ್ಲಿಲ್ಲ" ಎಂದುಕೊಂಡಳು.

 •