ಬಾರದ ಬರ
ಒಂದೂರಲ್ಲಿ ಇಬ್ಬರು ಅಣ್ಣತಮ್ಮಂದಿರು. ಅವರವರ ಹೆಂಡಿರು ಬಂದಿದ್ದರು. ಅಣ್ಣನಿಗೆ ಮಕ್ಕಳಾಗಲಿಲ್ಲ. ತಮ್ಮನಿಗೆ ಸಾಕಷ್ಟು ಮಕ್ಕಳಾಗಿದ್ದರು. ನೆಗೆಣ್ಣಿಯರಲ್ಲಿ ಕೂಡಿನಡೆಯಲಿಲ್ಲವೆಂದು ಅವರಿಬ್ಬರೂ ಆಸ್ತಿಯನ್ನು ಹಂಚಿಕೊಂಡು ಬೇರೆಯಾದರು.
ದೇಶಕ್ಕೆ ಬರಗಾಲ ಬಂತು ಒಮ್ಮೆ. ಅವಾಗ ಜನರು ಹೊಟ್ಟೆಗಿಲ್ಲದೆ ಕುಸುಬೆಯನ್ನು ಸಹ ಕೊಂಡು ತಿಂದರು. ಒಂದುದಿನ ಬೆಳಗು ಮುಂಜಾನೆ ತಮ್ಮನು ಅಣ್ಣನ ಮನೆಗೆ ಬಂದು -"ಅಣ್ಣಾ, ಕೈಗಡವಾಗಿ ಒಂದು ಸೊಲಗಿ ಜೋಳಕೂಡು. ಕೊಟ್ಟರೆ ನಾನು ನಟ್ಟುಕಡಿಯಲು ಹೊಲಕ್ಕೆ ಹೋಗುವೆನು" ಎಂದನು.
ಅಣ್ಣನು ಸರಸರನೆ ಹೋದವನೇ ಗಾದೆಮೆತ್ತಿಗೆಯನ್ನು ತೆಗೆದು ಒಂದು ಸೊಲಗಿ ಜೋಳವನ್ನು ತೆಗೆದು ತಮ್ಮನ ಉಡಿಯಲ್ಲಿ ಬರುಕಿದನು. ತಮ್ಮನು ಆ ಜೋಳ ಹೆಂಡತಿಗೊಪ್ಪಿಸಿ ತಾನು ಹೊಲಕ್ಕೆ ಹೋದನು.
ತಮ್ಮನ ಹೆಂಡತಿ ನುಚ್ಛು ಕುದಿಸಬೇಕೆಂದು ಒಲೆಹೊತ್ತಿಸಿ, ನೀರು ಎಸರಿಟ್ಠು ಜೋಳ ತೆಗೆದುಕೊಂಡು ಬೀಸುಕಲ್ಲಿನ ಬಳಿಗೆ ಹೋದಳು, ಜೋಳ ಒಡೆಯಲಿಕ್ಕೆ.
ನೆರೆಯಲ್ಲಿಯೆ ಇದ್ಧ ನೆಗೆಣ್ಣಿಯು ಬೆಂಕಿಗೆಂದು ಮೈದುನನ ಮನೆಗೆ ಹೋದಾಗ, ಮರದಲ್ಲಿ ಜೋಳವನ್ನು ಗುರುತಿಸುತ್ತಾಳೆ. ಹೊಟ್ಟೆಕಿಚ್ಛು ಭುಗಿಲ್ಲೆಂದು ಉರಿದೇಳುತ್ತಾಳೆ. ಒಲೆಯ ಮೇಲಿನ ಎಸರಿನಲ್ಲಿ ಹಿಡಿಗಲ್ಲು ಒಗೆದುಬಿಡದೆ, ಬೀಸಿದ ಹಿಟ್ಟಿನಲ್ಲಿ ಬೂದಿಮಣ್ಣು ಕಲೆಸುತ್ತಾಳೆ. ಅಷ್ಟು ಸಾಕಾಗದೆ ಮೊರದೊಳಗಿನ ಜೋಳವನ್ನು ತನ್ನುಡಿಯಲ್ಲಿ ಹಾಕಿಕೊಂಡು ಮನೆಗೆ ಹೋದಳು.
ತಮ್ಮನ ಹೆಂಡತಿಯು ತನ್ನ ಎಂಟುಜನ ಮಕ್ಕಳನ್ನು ಕರೆದುಕೂಂಡು ತವರುಮನೆಗೆ ಹೋಗಿ ಅಣ್ಣನ ಕಾಣದಿರಲು ಅತ್ತಿಗೆಗೆ ಕೇಳುವಳು—"ಕೈಗಡವಾಗಿ ಒಂದು ಸೇರು ಜೋಳ ಕೊಡು". ಅದಕ್ಕೆ ಅತ್ತಿಗೆ ಸ್ಪಷ್ತವಾಗಿ ಹೇಳಿದ್ದೇನಂದರೆ—"ನಮ್ಮಲ್ಲಿ ಸೇರುಜೋಳವೂ ಇಲ್ಲ; ಹೇರು ಜೋಳವು ಇಲ್ಲ."