ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೩೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ತಾಯಕೊಂದ ಪಾಪ

ಒಬ್ಬಾಕೆ ಹೆಣ್ಣು ಮಗಳಿದ್ದಳು. ಆಕೆ ನೀರು ಹೊಂಯ್ದುಕೊ೦ಡಿದ್ದಳು. ಅವರ ಮನೆಯಲ್ಲಿ ನಾಯಿಯೂ ಗಬ್ಬವಾಗಿತ್ತು. ತವರು ಮನೆಯವರು ಬುತ್ತಿತಂದರು. ನಾಯಿ ತನ್ನಲ್ಲೇ ಅಂದುಕೊಂಡಿತು — ಈಕೆ ಉಂಡ ಒಂದು ಅಗುಳಾದರೂ ನನಗೆ ಹಾಕಿದರೆ ಅದನ್ನೇ ನಾನು ತಿನ್ನುತ್ತೇನೆ. ಆದರೆ ಆ ಹೆಣ್ಣುಮಗಳದೇ ಒಂದು ಛಲ — ಈ ನಾಯಿಗೆ ಯಾಕೆ ಹಾಕಲಿ ತಿನ್ನಲಿಕ್ಕೆ? ಆದು ಹೀಗೇ ಉಪವಾಸ ಬೀಳಲಿ — ಎಂದು, ಎಮ್ಮೆಗೆ ಮುಸುರಿ ನೀರುಮಾಡಿ ಕುಡಿಸಿದಳು.

ನಾಯಿಗೆ ಸಂತಾಪವಾಗುತ್ತದೆ. ನನ್ನ ಮರಿ ಅವಳಿಗೆ ಹುಟ್ಟಲಿ, ಅವಳ ಕೂಸು ನನಗೆ ಹುಟ್ಟಲಿ — ಎಂದು ಅವಳಿಗೆ ಶಪಿಸುತ್ತದೆ. ಮುಂದೆ ಒಂಬತ್ತು ತಿಂಗಳು ತುಂಬಿದಾಗ ನಾಯಿಗೆ ಅವಳಿಜವಳಿ ಹೆಂಗೂಸು ಹುಟ್ಟಿದವು. ಹೆಣ್ಣುಮಗಳಿಗೆ ಎರಡು ನಾಯಕುನ್ನಿಗಳು ಹುಟ್ಟಿದವು.

ಒಂದು ತಗ್ಗಿನಲ್ಲಿ ನಾಯಿ ಈದಿತ್ತು. ಯಾರದೋ ಮನೆಯಿಂದ ರೊಟ್ಟಿಯನ್ನು ಕದ್ದುಕೊಂಡು ತಂದಿತು. ಇನ್ನೊಂದು ಮನೆಯಿಂದ ಅಂಗಿ ಕುಲಾಯಿ ಕದ್ದುಕೊಂಡು ತಂದಿತು. ಹೂಗಾರರ ತೋಟಕ್ಕೆ ಹೋಗಿ ಅವರು ಯಾರಿಂದಲೋ ಬೇಡಿತಂದ ಮುತ್ತಿನ ಕುಲಾಯಿ ಎತ್ತಿಕೊಂಡು ತಂದಿತು. ಅವಳಿಜವಳಿ ಹೆಣ್ಣುಮಕ್ಕಳು ಬೆಳೆದು ದೊಡ್ಡವರಾದರು.

ಪ್ರಧಾನಿಯೊಡನೆ ರಾಜನು ಸಂಚಾರಕ್ಕೆ ಹೊರಟಿದ್ದನು. ಪ್ರಧಾನಿಯ ಕಣ್ಣು ಆ ಇಬ್ಬರ ಮೇಲೆಯೂ ಬಿದ್ದಿತು. ರಾಜನಿಗೆ ಹೇಳುತ್ತಾನೆ — "ಹುಡುಗಿಯರು ಚೆಲುವಾಗಿದ್ದಾರೆ. ಗವಿಯೊಳಗೆ ಇರುವರಂತೆ. ನೋಡೋಣ ಬನ್ನಿ?’

ರಾಜನೊಂದಿಗೆ ಗವಿಗೆ ಹೋಗಿ, ಅಲ್ಲಿ ಇಬ್ಬರೂ ಅಕ್ಕತಂಗಿಯರನ್ನು ಮಾತನಾಡಿಸುತ್ತಾನೆ — "ತಂಗೆಂದಿರೇ, ನಿಮ್ಮೂರು ಯಾವುದು ? ನಿಮ್ಮ ತಾಯಿಯ ಹೆಸರೇನು ?"

"ಇದೇ ನಮ್ಮೂರು. ನಾಯಿಯೇ ನಮ್ಮ ತಾಯಿ? ಎಂದವರ ಮರುನುಡಿ.

"ನಮ್ಮೊಡನೆ ಬರುವಿರಾ?'" ಎಂದು ಪುಧಾನಿ ಕೇಳಲಿ, ಹಿರಿಯಳು "ಬರುವೆನು ನಡೆಯಿರಿ? ಅನ್ನುತ್ತಾಳೆ. "ಈಗ ಹೋಗೂದು ಬೇಡ. ಅವ್ವ ಬಂದ