ಬಳಿಕ ಅವಳನ್ನು ಕೇಳಿ ಹೋಗಾರಿ" ಎಂದು ಕಿರಿಯವಳು ಅಂದಳು. ಆದರೆ ಹಿರಿಯವಳು ಹೊರಟೇಬಿಡುತ್ತಾಳೆ. "ನೀನೊಬ್ಬಾಕೆ ಹೋದಮೇಲೆ ನಾಯೇಕೆ ಇರಬೇಕಿಲ್ಲಿ" ಎಂದು ಕಿರಿಯವಳೂ ಹೊರಟಳು.
ಅಕ್ಕತಂಗಿಯರು ರಾಜನ ಮನೆಯವರೆಗೆ ಮುತ್ತುಗಳನ್ನು ಚೆಲ್ಲುತ್ತ ಹೋದರು. ಸಣ್ಣಾಕೆ ಪ್ರಧಾನಿಯನ್ನೂ ದೊಡ್ಡಾಕೆ ರಾಜನನ್ನೂ ಲಗ್ನವಾದರು. ಮುತ್ತು ಅರಮನೆಗೆ ಬರುವತನಕ ಸಾಕಾದವು. ಮುಂದೆ ಪ್ರಧಾನಿಯ ಮನೆಯವರೆಗೆ ಮುತ್ತು ಚೆಲ್ಲಲಿಕ್ಕಾಗಲಿಲ್ಲ.
ನಿತ್ಯದಂತೆ ನಾಯಿ ತೋಟಕ್ಕೆ ಬಂತು. ಆದರೆ ಹೆಣ್ಣುಮಕ್ಕಳಿಬ್ಬರೂ ಇರಲಿಲ್ಲ. ಗಾಬರಿಯಾಗಿ ಮುತ್ತು ಚೆಲ್ಲಿದ ದಾರಿಹಿಡಿದು ಅರಮನೆಂಯವರೆಗೆ ಹೋಯಿತು. ದೊಡ್ಡಾಕೆ ಈಗ ರಾಣಿಯಾಗಿದ್ದಾಳೆ. ಆದರೆ ನಾಲ್ಕು ಜನರ ಮುಂದೆ ನಾಯಿಗೆ ತಾಯಿ ಅನ್ನಲಿಕ್ಕೆ ತಯಾರಿಲ್ಲ. ತಾಯಿಯ ಗುರುತು ಹಿಡಿದರೂ ಅದನ್ನು ಹೊಡೆದು ಹಾಕಬೇಕೆಂದು ವಿಚಾರಿಸಿದಳು. ರಾಜನು ಸಹ ಹಾಗೇ ಆಗಲೆಂದು ಹೇಳಿ, ನಾಯಿಯನ್ನು ಹೊಡೆದು ತಗ್ಗಿನಲ್ಲಿ ಹಾಕಿಸಿಬಿಟ್ಟನು. ನಾಯಿಂಬನ್ನು ಹೊಡೆದು ಹಾಕಿದ ಹೆಣ್ಣು ಮಗಳು ಅದೆಷ್ಟು ಪಾಪಿ ಎಂದು ಜನ ಮಾತಾಡಿತು.
ಅದೇ ಊರಲ್ಲಿ ಸಣ್ಣಮಗಳೂ ಇದ್ದಳು. ತಂಬಿಗೆ ತಗೊಂಡು ಹೊರಟಾಗ ತಗ್ಗಿನಲ್ಲಿ ಬಿದ್ದದ್ದು ತನ್ನ ತಾಯಿಯೇ ಎಂದು ಗುರುತಿಸಿದಳು. ನಾಯಿಯ ಎಲುವುಗಳನ್ನೆಲ್ಲ ಸಂಗ್ರಹಿಸಿ ತಂದು ಸಂದುಕಿನಲ್ಲಿಟ್ಟಳು.
ದಿನ ಕಳೆದಂತೆ ರಾಜನ ಸಂಪತ್ತೆಲ್ಲ ನಾಶವಾಗಿ ಹೋಯಿತು. ಪ್ರಧಾನಿಯ ಪರಿಸ್ಥಿತಿಯು ಮಾತ್ರ ಉತ್ತಮವಾಯಿತು. ಸಂದುಕಿನಲ್ಲಿಟ್ಟ ಎಲುವುಗಳೆಲ್ಲ ಬಂಗಾರದ ಚಡಿ ಹಾಕಲಾರಂಭಿಸಿದವು. ಒಂದೊಂದು ಬಂಗಾರದ ಚಡಿಯನ್ನು ಹೊರಗೊಯ್ದು ತಮಗೆ ಬೇಕಾದ ಸಾಮಾನು ತರಹತ್ತಿದರು. ಸುಖ ಸಮೃದ್ಧಿ ತುಂಬಿ ಹೊರಸೂಸತೊಡಗಿತು.
ಅಕ್ಕನು ತಂಗಿಯ ಮನೆಗೆ ಹೋದಾಗ "ನಿಮ್ಮ ಈ ಸಂಪತ್ತಿಗೇನು ಕಾರಣ?" ಎಂದು ಕೇಳುತ್ತಾಳೆ.
"ನೀ ಹೊಡಿಸಿ ಹಾಕಿಸಿದಂಥ ನಮ್ಮ ತಾಯಿಯ ಎಲುವುಗಳನ್ನೆಲ್ಲ ತಂದು ಸಂದುಕಿನಲ್ಲಿ ಇಟ್ಟೆ. ಅವು ದಿನಾಲು ಒಂದು ಬಂಗಾರದ ಚಡಿ ಕೊಟ್ಟವು" ಎಂದು ಹೇಳಿದಳು ತಂಗಿ.
ಅಕ್ಕ ತನ್ನ ಮನೆಗೆ ಹೋಗಿ, ಯಾವುದೋ ನಾಯಿಂಹನ್ನು ತರಿಸಿ ಹೊಡಿಸುತ್ತಾಳೆ. ಅದರ ಎಲುವುಗಳನ್ನೆಲ್ಲ ಮನೆಗೊಂಯ್ದು ಇಡುತ್ತಾಳೆ. ಮುಂದೆ