ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೪೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
೧೧೩

ದೀಪ ಮಾತಾಡಿತು

ಒಂದೂರಾಗ ಅತ್ತಿಗೆ ನಾದಿನಿ ಇದ್ರು ನಾದಿನಿ ನೀರು ಹೊಡ್ಕೊಂಡಿದ್ದಳು. ಐದರಾಗ ಅಣ್ಣ ತಂಗೀಗಿ ಕರಕೊಂಡು ಬರಲಿಕ್ಕ ಹೋದ. ಕರಕೊಂಡೂ ಬಂದ. ಅಡವ್ಯಾಗ ಒಂದು ಬಾಳೆಗಿಡ ಇತ್ತು. ಅದರ ಬುಡಕ್ಕ ಅಣ್ಣ ತಂಗಿ ಮನಕೊಂಡರು. ತಂಗಿ ನಿದ್ಯಾಗ ಗುರ್ ಹೊಡೆದಳು. ಹೊಟ್ಯಾಗಿನ ಕೂಸು ಗೊರಕಿ ಹೊಡೀತದ ಎಂದು ಅಣ್ಣ ತಂಗೀಗಿ ಲಗೂಮಾಡಿ ಮನೀಗಿ ಕರಕೊಂಡು ಬಂದ.

ಅತಿಗಿ ಎಷ್ಟಾದರೂ ಅತಿಗೀನೆ, ನಾದನಿಗಿ ನವಣಕ್ಕಿ, ಹಾರಕಿನ ಅಕ್ಕಿ ಉಣಿಸಿದಳೇ ಹೊರತು ನೆಲ್ಲಕ್ಕಿಯ ಅನ್ನಮಾಡಿ ನೀಡಲಿಲ್ಲ. ತಂಗೀಗಿ, ಆಕೀ ಮಕ್ಕಳೀಗಿ ಮನೆಮುಟ್ಟಿಸಿ ಅಣ್ಣ ಹೊಲಕ್ಕೆ ಹೋದ. ಗಂಡಗ ಶಾವಿಗಿ, ಬಾನಾ ಮಾಡಿ ನೀಡಿದಾಕಿ ನಾದಿನಿ ಮಕ್ಕಳಿಗಿ, ಮನಸ್ಯಾಗ ಒಂದೊಂದು ಬಿಲ್ಲಿರೊಟ್ಟಿ, ನವಣಕ್ಕಿ ಬಾನಾಮಾಡಿ ನೀಡಿದಳು. ಕೊಟಗ್ಯಾಗ ಮನಗಿಸಿದಳು. ಹೊಲದಿಂದ ಬಂದ ಗಂಡಗ ಹೇಳಿದಳು-ನಾದಿನಿ ಮತ್ತ ಕೂಸುಗಳೆಲ್ಲ ಉಂಡವು. ನಾಲೈದುದಿನ ದಿನಾಲು ಉಡುಗಿನ ದಾಣೆ ಉಣಿಸಿ, ಗಂಡ ಬರೂಕಿಂತ ಪಹಲೇನೆ ಉಣಿಸಿ, ಇನ್ನು ಮನಕೋರಿ ಎಂದು ಹೇಳುತ್ತಿದ್ದಳು. ಗಂಡನಿಗಿ ಹೆಂಡತಿಯ ಒಳಗಿನ ತಿಪಲ ಮಾತ್ರ ಖೂನ ಆಗಲಿಲ್ಲ. ಹೀಂಗೇ ಎಂಟುದಿನ ನಡೀತು. "ಇನ್ನ ಹೋಗಾರಿ ಮಗಾ" ಎಂದು ತಂಗಿ ತನ್ನ ಮಕ್ಕಳಿಗೆ ಅಂದಳು. ತವರ್ಮನಿ ಸುಖ ಬಹಳ ಆಯ್ತು—ಅಂದುಕೊಂಡಳು. "ಅಣ್ಣಾ, ನಾ ಇನ್ನ ಹೋಗತೀನು ನಮ್ಮ ಮನೀಗಿ" ಅಂದಾಗ ತಂಗೀಗಿ ಸೀರಿ, ಹುಡುಗರಿಗಿ ಅರಿವೆ ತರಬೇಕು ಎಂದಾಗ, ಅಣ್ಣನ ಹೆಂಡತಿ—ನಾನೇ ತರತೀನಿರೊಕ್ಕಾ ತಾತಾ-ಅಂದಳು. ನೂರುದೀಡಸೆ ಪದರಾಗ ಕಟಕೊಂಡು ದುಕಾನಕ್ಕೆ ಹೊಂಟಳು. ಆಕಡಿ ಈಕಡಿ ಓಡಾಡಿ ತಿಪ್ಪಿಮ್ಯಾಲಿಂದು, ಮೊಸಂಡೀ ಮ್ಯಾಗಿಂದು ಅರಿಬಿ ಜೋಡಿಸಿದಳು. ಕತ್ತಲಾಗೋದಕ್ಕೆ ಮೀರಿ ಬಂದಳು. ದೊಡ್ಡ ಗಂಟುಕಟ್ಟಿ ಇಟ್ಟಳು. ನಾಳೀಗಿ ಇದನ್ನು ಒಯ್ಯು ಎಂದು ನಾದಿನಿಗೆ ಹೇಳಿಬಿಟ್ಟಳು. ಬಾನ, ಬ್ಯಾಳಿ ಮಾಡಿ