ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೪೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ವಾಸ್ತವಿಕ ಕಥೆಗಳು

೧೧೫

ಯಾತಕ್ಕೂ ಯಾನು ಕೊರತಿ ಬೀಳಲಿಲ್ಲ.

ಜಬರದಸ್ತ ಒಕ್ಕಲುತನ ಮಾಡಿದಳು, ಒಂದು ಜೋಡು ಎತ್ತು ಬೇಕಾದವು. ರೊಕ್ಕ ಪದರಾಗ ಕಟಗೊಂಡು ತಂಗಿ ಸಂತೀಗಿ ಹೋದಳು. ಅತಗೀನೂ ಸಂತಿಗಿ ಬಂದಿದ್ದಳು. ನಾದಿನಿಯ ಸೀರೇನು, ತೆನಿತಿರುವಿದ ಕುಬಸೇನು, ಮೈಮೇಲಿನ ಡಾಗೀಣೇನು — ಝೋಕು ಆಗ್ಯಾಳೆಂದು ಮನಸಿನಾಗೆ ಹಲ್ಲು ಕಡಿದಳು. ಹೊಟ್ಯಾಗ ಬೆಂಕಿ ಬಿದ್ದಾಂಗಾಯ್ತು ಅವಳಿಗಿ. ಸರ್‍ರನೆ ಮನೀಗಿ ಹೋಗಿಬಿಟ್ಟಳು.

ತಂಗೀನೂ ತನ್ನ ಮನೀಗಿ ಬಂದಳು. ರಾತ್ರಿ ದೀಪ ಮಾತಾಡಿತು "ಎಲ್ಲಾರು ಬಂದು ಹೋದರು. ನಾನೂಬಿ ಯಾವಾಗ ಹೋಗಲಿ" ಎಂದು ಕೇಳೇ ಕೇಳಿತು. ತಂಗಿ ತನ್ನ ತಾಪ ಎಲ್ಲ ದೀಪದ ಮುಂದ ಒಡೆದು ಹೇಳಿದಳು — "ನನ್ನ ಮಕ್ಕಳು ಮರಿ ಬಹಾಳ ವನವಾಸ ಕಳೆದಾವ. ನನ್ನ ಅತ್ತಿಗಿ ಬಿಲ್ಲಿರೊಟ್ಟಿ ಕೊಟ್ಟಾಳ. ಕುಳ್ಳಿನ ಬುತ್ತಿ ಕಟ್ಯಾಳ. ನೀನೇ ನನ್ನ ಸಾಥೀ. ನೀ ಬಿಟ್ಟುಹೋದರ ನಾ ಹ್ಯಾಂಗ್ ಇರಲಿ?"

ಇಕಡಿ ಅತಿಗಿ ಮನೀಗಿ ಹೋಗಿ ಗಂಡಗಹೇಳ್ತಾಳ — "ನಿನ್ನ ತಂಗಿಯ ಗುಣಾನೇ ಚಂದಿಲ್ಲ. ಅಕಾ ಅವಳ ಸೀರೇನು, ಅವಳ ಥಾಟೇನು. ಹೆಂಗೋ ಏನೋ...” ಕೊಡಲಿ ತಗೊಂಡು ತಂಗೀಗಿ ಕಡೀಲಿಕ್ಕಿ ಹೊಂಟಾನ. ತಂಗಿ ಜ್ಯೋತಿ ಸುತ್ತ ಮಾತಡಿದ್ದು ಕೇಳಿಸಗೋತಾನ. ದೇವರs ನೀನೆ ಕಾಯಿ ಎಂದು ದೇವರ ಮುಂದ ಅಡ್ದಿ ಬೀಳೂದು ನೋಡ್ತಾನ. ಮನಸಿನಾಗ ಅಂತಾನ

"ನನ್ನ ತಂಗಿ ತಾಪ ನನಗ ಇಂದ ಖೂನ ಅಯ್ತು. ಎಲಾ ಇವಳ ನನ್ನ ಖಾಸಾ ಒಡಹುಟ್ಟಿದ ತಂಗೀಗಿ ಮೂಲ್ಯಾಗೀನ ದಾಣಿ ಉಣಿಸಿದಳಲ್ಲಾ."

ತಂಗೀ ಮುಂದ ಅಣ್ಣ ಬಂದು- "ನಂದುಕಡೆ ತಪ್ಪಾತು. ಕ್ಷಮಾ ಇರಲಿ"

ಎಂದನು ತಂಗಿಗೆ.

ಅಣ್ಣನಿಗಿ ತಂಗಿ ಶಾವಿಗಿ, ಬಾನಾ ಮಾಡಿ ನೀಡಿದಳು.

ತನ್ನ ಮನಿಗಿ ಹೋಗಿ ಇಂಥಾ ಕೆಟ್ಟ ಇಚಾರ ಮಾಡಿದಕ್ಕೆ ಹೆಂಡತಿಗಿ ಅದೇ ಕೊಡಲಿಯಿಂದ ಕಡಿದು ಹಾಕಿದ.


 •