ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೪೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೧೨೨
ಜನಪದ ಕಥೆಗಳು

ಪ್ರಧಾನಿಯು ಒದಗಿಸಿದ ಸಂಗತಿಗಳನ್ನು ಕೇಳಿಕೊಂಡ ಬಳಿಕ, ರಾಜನಿಗೆ ಹೆಚ್ಚು ತಿಳುಕೊಳ್ಳುವ ಅಗತ್ಯವೇ ಉಳಿಯಲಿಲ್ಲ. ಸೇವಕನನ್ನು ಕರೆದು ರಾಜನು ಹೇಳಿದನು -

“ನೋಡಿದೆಯಾ ? ನೀನು ಹತ್ತೆಂಟು ಸಾರೆ ಎಡತಾಕಿ ಮಾಹಿತಿ ತಂದರೂ ಅಪೂರ್ಣವಾಗಿಯೇ ಉಳಿಯಿತು. ಪ್ರಧಾನಿಯು ಒಂದೇ ಸಾರೆ ಹೋಗಿ ಬಂದರೆ, ಯಾವ ಸಂಗತಿಯನ್ನೂ ಉಳಿಸಿಕೊಂಡು ಬರಲಿಲ್ಲ. ಅದಕ್ಕಾಗಿಯೇ ಆತನ ಸಂಬಳ ಅಷ್ಟು, ನಿನ್ನ ಸಂಬಳ ಇಷ್ಟೇ.

 •