ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೫೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
೧೨೫

ನಾಲ್ಕು ಪ್ರಶ್ನೆಗಳಿಗೆ ಉತ್ತರ

ಒಬ್ಬ ರಾಜನಿದ್ದನು. ಅವನಿಗೆ ಜಾಣನಾದ ಮಂತ್ರಿಯಿದ್ದನು. ಮಂತ್ರಿಯ ಸಹಾಯದಿಂದ ರಾಜ್ಯವಾಳುತ್ತ ರಾಜನು ಸುಖದಿಂದ ಇದ್ದನು.

ರಾಜನು ಒಂದು ದಿವಸ ಮಂತ್ರಿಮಾನ್ಕರೊಡನೆ ತನ್ನೋಲಗದಲ್ಲಿ ಕುಳಿತಾಗ ನೆರೆಯ ರಾಜನ ಕಡೆಯಿಂದ ಒಬ್ಬ ದೂತನು ಬಂದು, ತಾನು ತಂದ ಪತ್ರವನ್ನು ಮಂತ್ರಿಯ ಕೈಗೆ ಕೊಟ್ಟನು. ಮಂತ್ರಿ ಅದನ್ನೋದಿ ರಾಜನಿಗೆ ಹೇಳಿದನು "ನೆರೆಯ ರಾಜನು ನಾಲ್ಕು ಪ್ರಶ್ನೆಗಳನ್ನು ಬರೆದು ಕಳಿಸಿದ್ದಾನೆ. ಆ ಪ್ರಶ್ನೆಗಳಿಗೆ ಸೂಕ್ತವಾದ ಉತ್ತರ ಕೊಡಬೇಕು. ಇಲ್ಲವೆ ಯುದ್ಧಕ್ಕೆ ಸಿದ್ಧರಾಗಬೇಕು."

"ಯಾವುವು ಆ ನಾಲ್ಕು ಪ್ರಶ್ನೆಗಳು" ಎಂದು ರಾಜನು ಕೇಳಿದನು.

ಮಂತ್ರಿ ಹೇಳುತ್ತಾನೆ—"ಇವೇ ಆ ನಾಲ್ಕು ಪ್ರಶ್ನೆಗಳು. (೧) ಒಳ್ಳೆಯದರಲ್ಲಿ ಕೆಟ್ಟದು ಯಾವುದು? (೨) ಕೆಟ್ಟದರಲ್ಲಿ ಒಳ್ಳೆಯದು ಯಾವುದು? (೩) ಅಂಗಡಿಯೊಳಗಿನ ನಾಯಿ ಯಾವುದು ) (೪) ಸಿಂಹಾಸನ ಮೇಲಿನ ಕತ್ತೆಯಾವುದು?"

"ಈ ಪ್ರಶ್ನೆಗಳಿಗೆ ಈಗಲೇ ಉತ್ತರ ಕೇಳಲಾಗಿದೆಯೆ?

"ಅಹುದು. ಆದರೆ ನಾನಿದಕ್ಕೆ ಮೂರುತಿಂಗಳ ಅವಧಿ ಕೇಳುವೆನು, ಆ ನೆರೆಯ ರಾಜನಿಗೆ. ಅಷ್ಟರಲ್ಲಿ ಉತ್ತರ ಸಿದ್ಧಪಡಿಸೋಣ" ಎಂದು ಮಂತ್ರಿಯು ರಾಜನಿಗೆ ಹೇಳಿ, ಬಂದ ದೂತನ ಕೈಯಲ್ಲಿ ಪ್ರತ್ಯುತ್ತರ ಬರಕೊಟ್ಟನು. ಅದರಲ್ಲಿ ಆ ನಾಲ್ಕು ಪ್ರಶ್ನೆಗಳಿಗೆ ಉತ್ತರ ಒದಗಿಸಲು ಮೂರುತಿಂಗಳ ಅವಧಿ ಬೇಕೆಂದು ತಿಳಿಸಿದರು.

ಮಂತ್ರಿಯು ನಾಗರಿಕನ ವೇಷದಿಂದ ನೆರೆಯ ರಾಜನ ಪಟ್ಟಣಕ್ಕೆ ಹೋಗಿ ಅಲ್ಲಿಯೇ ನೆಲೆಸಿದನು. ಪಟ್ಟಣದ ಪ್ರತಿಷ್ಠಿತ ಜನರೊಡನೆ ಸ್ನೇಹ ಬೆಳೆಸಿದನು. ಸಕಲರಿಗೂ ಪರಿಚಿತವ್ಯಕ್ತಿಯಾದನು. ಅಲ್ಲದೆ ಅಲ್ಲಿಯ ಒಬ್ಬ ಕಲಾವತಿಂಯಾದ ಪಾತ್ರದವಳೊಡನೆ ಸಂಪರ್ಕವನ್ನಿರಿಸಿಕೊಂಡನು. ಅಲ್ಲಿಯ ಕೊತವಾಲನೊಡನೆ ವಿಶೇಷ ಬಳಕೆ. ಅವರ ಮನೆಗಳೂ ಹತ್ತಿರ ಹತ್ತಿರದಲ್ಲಿಯೇ ಇದ್ದವು. ತಿಂಗಳೊಪ್ಪತ್ತಿನಲ್ಲಿ ಅಲ್ಲಿಯ ಪರಿಚಿತರೆಲ್ಲರೂ ಸೇರಿ, ಆತನಿಗೊಂದು ಅನುರೂಪ ಕನ್ಶೆಯನ್ನು