ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೫೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಬುಧ್ಧಿವಂತಿಕೆಯ ಕಥೆಗಳು

೧೨೯

ಅವೆರಡು ಗೊಂಬೆಗಳನ್ನು ತಂದು ಗಂಡನು ಸರಿಯಾದ ಸ್ಥಳಗಳಲ್ಲಿ ಗಟ್ಟಿಯಾಗಿ ನಿಲ್ಲಿಸಿದನು. ಹೆಂಡತಿ ಎಂದಿನಂತೆ ಹಾಲಗಡಿಗೆಯನ್ನು ತೆಗೆದುಕೊಂಡು ಕೆನೆ ತಿನ್ನಬೇಕೆಂದು, ಪಾತ್ರೆ ತೆಗೆದುಕೊಳ್ಳಲು ಕೈ ಚಾಚಿದಾಗ ಅಲ್ಲಿ ನಿಲ್ಲಿಸಿದ ಗೊಂಬೆ - "ಬಟ್ಟಲ್ಯಾತಕ್ಕ" ಎಂದು ಕೇಳಿತು. ಅತ್ತ ಕಡೆಗೆ ಕಿವಿಕೊಡದೆ ಹಾಲಗಡಿಗೆಯ ಬಳಿಗೆ ಬಂದಾಗ - "ಹಾಲು ಕೆನಿ ತಿನ್ಷಕ್ಕೆ' ಎಂದಿತು ಇನ್ನೊಂದು ಗೊಂಬೆ. ಅಷ್ಟಕ್ಕೆ ಬಿಡಲಿಲ್ಲ ಆ ಗೊಂಬೆಗಳು.

ಒಂದು ಕೇಳುವುದು - "ಬಟ್ಟಲ್ಯಾತಕ್ಕ?"

ಇನ್ನೊಂದು ಕೇಳುವುದು - "ಕೆನಿತಿನ್ಸಕ್ಕ."

ಈ ಕ್ರಮ ನಡೆದೇ ನಡೆಯಲು ಹೆಂಡತಿ ಹುಚ್ಚು ಹಿಡಿದಂತೆ ನಿಂತುಬಿಟ್ಟಳು. ಅದೇ ಹೊತ್ತಿಗೆ ಅಕಸ್ಮಾತ್‌ ಗಂಡ ಬರಲು ಆಕೆ ಗೊಂಬೆಗಳ ಸಲುವಾಗಿ ದೂರು ಹೇಳಿದಳು - "ನೋಡಿರಿ. ಈ ಗೊಂಬೆಗಳು ಸುಳ್ಳುಸುಳ್ಳೇ ಕೂಗಾಟ ಎಬ್ಬಿಸಿವೆ. ಬಟ್ಟಲ್ಯಾತಕ್ಕ ಅನ್ನುತ್ತದೆ ಒಂದು. ಕೆನಿತಿನ್ಸಕ್ಕ ಅನ್ನುತ್ತದೆ ಇನ್ನೊಂದು, ಅವುಗಳನ್ನು ಕಿತ್ತೊಗೆಯಿರಿ."

"ಇರಲಿ ಬಿಡು. ಅವೇನು ಮಾಡುತ್ತವೆ ನಿನಗೆ?"

ತರುವಾಯ ಹಾಲು ಕಾಸಿದರೆ ಕೆನೆ ಬರತೊಡಗಿತು. ಕಡಿದರೆ ಮುದ್ದೆ ಮುದ್ದೆ ಬೆಣ್ಣೆ; ಕಾಸಿದರೆ ತಂಬಿಗೆ ತಂಬಿಗೆ ತುಪ್ಪ. ಅದನ್ನು ಕಂಡು ಗಂಡನು ಹಿಗ್ಗಿ-

"ಹೆಂಡತಿ ಜೆನ್ನಾಗಿ ಮಾಡುವಳು ಹಯನ?" ಎಂದು ಹೊಗಳತೊಡಗಿದನು.

 •