ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೬೧

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೧೩೪
ಜನಪದ ಕಥೆಗಳು

"ನಾನೇನೂ ಬರೂದಿಲ್ಲಪ್ಪ" ಎಂದನು ಇಕ್ಕಾ.

ಮಲಗುವ ಕೋಣೆಯಲ್ಲಿಯೇ ಕೋಮುಟಿಗನು ಹೊಲಸು ಮಾಡಬೇಕಾಯಿತು. ಆದ್ದರಿಂದ ನಸುಕಿನಲ್ಲಿಯೇ ಎದ್ದು ಹಳ್ಳಕ್ಕೆ ಹೊರಟನು.

"ನಿಮ್ಮಳಿಯ ಹೇಳಿಕೇಳಿ ಹುಚ್ಚ, ಈಗ ಮನೆಬಿಟ್ಟು ಹೊಂಟಾನ" ಎಂದು ಇಕ್ಯಾ ಹೇಳಿದ್ದರಿಂದ ಭಾವಂದಿರು ಬಂದು — "ಮಾವ ಎಲ್ಲಿ ಹೊರಟಿ, ಯಾಕೆ ಹೊರಟಿ" ಎಂದು ತರುಬಿ ಮಾತಾಡಿಸುವಷ್ಟರಲ್ಲಿ ಅರಿವೆ ಕೆಳಗೆ ಬಿದ್ದು ಎಲ್ಲರ ಮುಂದೆ ಅವಮಾನವಾಯಿತು.

ಹಳ್ಳದಲ್ಲಿ ಬಟ್ಟೆ ಒಗೆದರು. ಕೋಮಟಿಗ ಹನುಮಂತ ದೇವರ ಗುಡಿಯಲ್ಲಿ ಕುಳಿತನು. ಹೆಂಡತಿ ಆರತಿ ತೆಗೆದುಕೊಂಡು ಗುಡಿಗೆ ಬಂದಳು. "ದೇವರ ಮುಂದೆ ತೆಂಗು ಒಡೆಯದೆ, ನಿನ್ನ ಗಂಡನ ತಲೆಗೇ ತೆಂಗು ಒಡೆ" ಎಂದು ಇಕ್ಯಾ ಸೂಚನೆ ಕೊಡುತ್ತಾನೆ. ಅದರಂತೆ ತೆಂಗು ಒಡೆಯುವಷ್ಟರಲ್ಲಿ ಕೋಮಟಿಗ ಕವಳುಶತ್ತಿ ಸತ್ತು ಬಿದ್ದನು.

ಇಕ್ಯಾ ಕೋಮಟಿಗನ ಹೆಂಡತಿಗೆ ಲಗ್ನವಾದನಂತೆ.

 •