ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೬೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

೧೩೭

ಪಾದರಕ್ಷೆಯ ಪುಣ್ಯ

ಶ್ರೀಮಂತಿಕೆಯನ್ನು ಭೋಗಿಸಿ, ಸಾಮಾನ್ಯಸ್ಥಿತಿಗೆ ಬಂದ ಇಬ್ಬರು ಗಂಡಹೆಂಡಿರು ಒಂದೂರಿನಲ್ಲಿ ಇದ್ದರು. ಅವರ ಕುಲಗುರುಗಳು ವಾಡಿಕೆಯಂತೆ ಅವರ ಮನೆಗೆ ಆಗಮಿಸಿದರು, ಒಬ್ಬ ಸೇವಕನೊಡನೆ. ಆ ಗಂಡಹೆಂಡಿರು ತಮ್ಮ ಸಾಮಾನ್ಮಸ್ಥಿತಿಯನ್ನು ಗುರುಗಳಿಗೆ ತೋರಗೊಡದೆ, ಮೊದಲಿನಂತೆಯೇ ಅವರನ್ನು ಸತ್ಕರಿಸಲು ನಿಶ್ಚಯಿಸಿದರು. ತಮ್ಮ ಮನೆಯೊಳಗಿನ ಒಂದು ಕೋಣೆಯಲ್ಲಿ ಗುರುಗಳು ಇಳಿದುಕೊಳ್ಳಲು ಏರ್ಪಡಿಸಿದರು. ಆದರೆ ಗುರುಗಳಿಗೆ ಬಿನ್ನಹಮಾಡಿ ದಕ್ಷಿಣೆಕೊಡಮಾಡುವುದು ಏತರಿಂದ — ಎಂದು ಆ ದಂಪತಿಗಳು ಯೋಚಿಸತೊಡಗಿದರು. ಅವರಿಗೊಂದು ಯುಕ್ತಿ ಹೊಳೆಯಿತು — "ಗುರುಗಳಿಗೆ ಪ್ರತ್ಯೇಕವಾದ ಒಂದು ಜೊತೆ ಚಮ್ಮಳಿಗೆಗಳಿವೆ. ಹೇಗಾದರೂ ಅವುಗಳನ್ನು ಅವರು ಉಪಯೋಗಿಸುವದಿಲ್ಲ. ಚೇಲದಲ್ಲಿ ಬಯತಿರಿಸಿರುತ್ತಾರೆ. ಅವುಗಳನ್ನು ಅವರಿಗೆ ಗೊತ್ತಾಗದಂತೆ ಒಯ್ದ ಮಾರಿ ಬಂದರಾಯಿತು. ತಕ್ಕಷ್ಟು ಹಣ ಬರುತ್ತದೆ. ಅದನ್ನೇ ಖರ್ಚು ಮಾಡಿ, ಗುರುಗಳಿಗೆ ಬಿನ್ನಹಮಾಡಿಸಿ ಮೇಲೆ ದಕ್ಷಿಣೆ ಕೊಡಬಹುದು.

ಗಂಟಿನಲ್ಲಿದ್ದ ಆ ಚಮ್ಮಳಿಗೆಗಳನ್ನು ಗುರುಗಳಿಗೂ ಅವರ ಸೇವಕನಿಗೂ ಗೊತ್ತಾಗದಂತೆ ಎತ್ತಿತಂದು ಕೊಟ್ಟವಳು ಹೆಂಡತಿ. ಅವುಗಳನ್ನು ಪೇಟೆಗೊಯ್ದು ಮಾರಿಕೊಂಡು ಮೂವತ್ತು ರೂಪಾಯಿ ತಂದವನು ಗಂಡ. ಆ ಬಳಿಕ ಗೋದಿ, ಅಕ್ಕಿ, ಬೇಳೆ, ಬೆಲ್ಲ, ತುಪ್ಪ, ಎಣ್ಣೆ ಎಣ್ಣಿ ಮೊದಲಾದವುಗಳನ್ನು ಕೊಂಡುತಂದರು. ಗೊತ್ತು ಮಾಡಿದ ದಿವಸ ಹೂರಣಕ್ಕೆ ಹಾಕಿ ಹೋಳಿಗೆ ಮಾಡಿದರು. ತುಪ್ಪವಂತೂ ಬೆಣ್ಣೆ ಕಾಸಿದ್ದಿತ್ತು.

ಗುರುಗಳ ಸ್ನಾನ, ಪೂಜೆ ಆದ ಬಳಿಕ ಆ ದಂಪತಿಗಳು ಪಾದಪೂಜೆಗೆ ಕುಳಿತರು. ಅದು ಮುಗಿದ ಮೇಲೆ ಕರಣಪ್ರಸಾದ ತೆಗೆದುಕೊಂಡು ಗುರುಗಳಿಗೆ ಉಣಬಡಿಸುವ ಏರ್ಪಾಡು ನಡೆಸಿದರು. ಹೋಳಿಗೆ — ತುಪ್ಪದ ಊಟದಿಂದ ಗುರುಗಳು ಸಂತೃಪ್ತರಾದರು. ಶಿಷ್ಯ ಮಕ್ಕಳು ಗುರುಗಳ ಕಾಲಿಗೆರಗಿ ಇಪ್ಪತ್ತುರೂಪಾಯಿ ಗುರುದಕ್ಷಿಣೆಯಿಟ್ಟರು. ಗುರುಗಳಿಗೆ ಅತಿಶಯ ಆನಂದವಾಗಿ