ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೭೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

ಬುದ್ಧಿವಂತಿಕೆಯ ಕಥೆಗಳು

೧೪೩

ಭಾವನು ಹೇಳುತ್ತಾನೆ — "ನೋಡಿದೆಯಾ ಬೀಗ, ನಮ್ಮ ತಾಪತ್ರಂಖವನ್ನು? ಮೂರು ದಿನಗಳಾದವು ಕೂಳು ನೀರು ಕಂಡಿಲ್ಲ. ರೊಟ್ಟಿ ಮಾಡುವವರೂ ದಿಕ್ಕಿಲ್ಲದಂತಾಗಿದೆ."

ಬೀಗನಿಗೆ ಆ ಮಾತು ನಿಜವೆನಿಸಲಿಲ್ಲ "ಹೂರಣವನ್ನು ಅರೆಯುವ ಕಬಲ್ಲನ್ನೇಕೆ ಹೊರಗಿಟ್ಟಿದ್ದಾರೆ ? ಏನು ಚಮತ್ಕಾರವಿದು ? ಮನೆಯಲ್ಲೆಲ್ಲ ಕಮರಿನ ದುಂದುಕಾರ ಇಡಗಿದೆ. ಇವರು ಹೋಳಿಗೆಮಾಡಿದ್ದು ನಿಶ್ಚಯ. ನನ್ನನ್ನು ಕಳಿಸಿಕೊಟ್ಟು ತಾವೇ ತಿನ್ನಬೇಕೆಂದು ಮಂಡಿಗೆ ಮಾಡಿದ್ದಾರೆ" ಎಂದೇ ನಿರ್ಣಯಿಸಿದನು.

ಮತ್ತೆ ಭಾವ ಹೇಳುತ್ತಾನೆ — "ಬೀಗಾ, ನಿನ್ನೂರಿಗೆ ಹೋಗಿಬಿಡು. ಇಲ್ಲಿದ್ದರೆ ಉಪವಾಸ ಮರುಗಬೇಕಾದೀತು.?

"ಹೋಗೇ ಬಿಡುತ್ತೇನೆ. ಒಂದು ಚುಟ್ಟ ತಂಬಾಕನ್ನಾದರೂ ಕೊಡು ಸೇದುವದಕ್ಕೆ" ಎಂದನು ಬೀಗ.

"ಮನೆಯ ತಂಬಾಕವನ್ನೆಲ್ಲ ಮೊನ್ನೆಯೇ ಮಾರಿ ಬಂದವು. ಅಂಗಡಿಯಿಂದ ತರಬೇಕೆಂದರೆ ಅವರು ಉದ್ದರಿ ಕೊಡುವದಿಲ್ಲ" ಎಂದು ಭಾವನು ಮರುನುಡಿಂಯಲು ಬೀಗನು ಹೊರಟು ಹೋದನು.

"ಏಳು ಏಳು ! ಹೀಡೆ ಹೋಯಿತು. ಹಸಿವೆಯಾದ ಕೈಯಲ್ಲಿ ಬಿಸಿ ಜಿಸಿ ಅಡಿಗೆ ಉಣಬಡಿಸು" ಎಂದು ನುಡಿದು, ಗಂಡನು ವಿನೋದಕ್ಕಾಗಿ ಒಂದು ಕಟ್ಟಳೆ ಹಾಕಿದನು. ಏನಂದರೆ — "ಇಬ್ಬರೂ ಕಣ್ಣು ಕಟ್ಟಿಕೊಂಡು ಊಟಮಾಡೋಣ. ಅಲ್ಲದೆ ತುತ್ತುಮಾಡಿ ನೀನು ನನಗೆ ಉಣ್ಣಿಸು. ನಾನು ತುತ್ತು ಮಾಡಿ ನಿನ್ನ ಬಾಯಿಗಿಡುತ್ತೇನೆ. ಸಾಕಾಗುವಷ್ಟು ನುಂಗು."

ಆ ಮಾತು ಹೆಂಡತಿಗೂ ಸಮ್ಮತವಾಯಿತು. ಗಂಡಹೆಂಡಿರಿಬ್ಬರೂ ಕಣ್ಣು ಕಟ್ಟಿಕೊಂಡು ಕುಳಿತುಬಿಟ್ಟರು.

ತನ್ನ ಊರಿಗೆ ಹೋಗುವೆನೆಂದು ಹೇಳಿ ಹೋದ ಬೀಗನು, ಎಲ್ಲಿಯೂ ಹೋಗದೆ ಹೊರಳಿ ಬಂದು ಮಾಳಿಗೆ ಏರಿ ಕುಳಿತಿದ್ದನು.

ಮೊದಲಿಗೆ ಹೆಂಡತಿ ಹೋಳಿಗೆಯನ್ನು ಹರಿದು, ತುಪ್ಪದಲ್ಲಿ ಅದ್ದಿ ತುತ್ತು ಮಾಡಿ ಗಂಡನ ಬಾಯಿಕಡೆ ಒಯ್ಯುವುದಕ್ಕೆ ಮಾಳಿಗೆ ಏರಿದ್ದ ಬೀಗನು ಹವುರಾಗಿ ಇಳಿದು ಬಂದು, ಆ ತುತ್ತು ತೆಗೆದುಕೊಂಡನು ತನ್ನ ಬಾಂಹಲ್ಲಿ. ಅದರಂತೆ ಗಂಡನು ಹಾಕುವ ತುತ್ತನ್ನೂ ಮಾಳಿಗೆಯ ಬೀಗನು ಅನುಮಾನವಿಲ್ಲದೆ ತೆಗೆದುಕೊಂಡನು. ಪರಸ್ಪರರಿಗೆ ತುತ್ತುಮಾಡಿ ಉಣ್ಣಿಸುವ ಕೆಲಸ ಕೆಲಹೊತ್ತು ಸಾಗಿದ ಬಳಿಕ ಹೆಂಡತಿ ಯೋಚಿಸಿದಳು -ಮೊದಲಿಗೆ ಹೆಂಡತಿ ಹೋಳಿಗೆಯನ್ನು ಹರಿದು, ತುಪ್ಪದಲ್ಲಿ ಅದ್ದಿ ತುತ್ತು ಮಾಡಿ ಗಂಡನ ಬಾಯಿಕಡೆ ಒಯ್ಯುವುದಕ್ಕೆ ಮಾಳಿಗೆ ಏರಿದ್ದ ಬೀಗನು ಹವುರಾಗಿ ಇಳಿದು ಬಂದು, ಆ ತುತ್ತು ತೆಗೆದುಕೊಂಡನು ತನ್ನ ಬಾಯಲ್ಲಿ. ಅದರಂತೆ ಗಂಡನು ಹಾಕುವ ತುತ್ತನ್ನೂ ಮಾಳಿಗೆಯ ಬೀಗನು ಅನುಮಾನವಿಲ್ಲದೆ ತೆಗೆದುಕೊಂಡನು. ಪರಸ್ಪರರಿಗೆ ತುತ್ತುಮಾಡಿ ಉಣ್ಣಿಸುವ ಕೆಲಸ ಕೆಲಹೊತ್ತು ಸಾಗಿದ ಬಳಿಕ ಹೆಂಡತಿ ಯೋಚಿಸಿದಳು -