ಈ ಪುಟವನ್ನು ಪ್ರಕಟಿಸಲಾಗಿದೆ
೧೪೪
ಜನಪದ ಕಥೆಗಳು
"ನನ್ನ ಗಂಡ ಬಹಳ ಹಸಿದಂತೆ ತೋರುತ್ತದೆ. ಯಾವಾಗಿನಿಂದಲೂ ತುತ್ತು ಮಾಡಿ ಹಾಕುತ್ತಲೇ ಇದ್ದೇನೆ. ಆದರೆ ಅವನು ಮಾತ್ರ ನನ್ನ ಜಾಂಹಲ್ಲಿ ಒಂದು ತುತ್ತು ಸಹ ಹಾಕಲೊಲ್ಲನಲ್ಲ!"
ಗಂಡನೂ ಯೋಚಿಸಿದನು "ಈ ರಂಡೆ ಎಲ್ಲವನ್ನೂ ತಾನೇ ತಿನ್ನುತ್ತಿದ್ದಾಳೆ."
ಆದರೆ ಅಡ್ಡ ಬಾಯಿ ಹಾಕಿ, ಎರಡೂ ಕಡೆಯ ತುತ್ತುಗಳನ್ನು ಕಬಳಿಸುವ ಜೀಗನು ಬೇರೆಯೇ ಇದ್ದಾನೆ. ಅವನ ಗಡ್ಡ ಮೀಸೆಗಳಲ್ಲೆಲ್ಲ ತುಪ್ಪವು ಸೋರಾಡುವಂತಾಯಿತು. ಹೊಟ್ಟೆ ತುಂಬಿಬಿಟ್ಟಿತು. ಅ ಅ s s ಬ—ಎನ್ನುತ್ತ ಢರಿಬಿಟ್ಟನು.
ಆ ಸಪ್ಪಳವನ್ನು ಕೇಳಿ "ಏನೋ ಘಾತ ಆಯಿತು" ಎನ್ನುತ್ತ ಗಂಡಹೆಂಡಿರಿಬ್ಬರೂ ಕಣ್ಕಟ್ಟು ಕಳಚಿಹಾಕುತ್ತಾರೆ—ಮುಂದೆ ಕುಳಿತಿದ್ದಾನೆ ಬೀಗ!
"ಬಹಳ ತುಂಟ ನೀನು" ಎಂದರು.
"ನೀವೇನು ಕಡಿಮೆ? ಹೋಗಿ ಬರುತ್ತೇನೆ. ಕುಶಾಲವಾಗಿ ಇದ್ದುಬಿಡಿರಿ" ಎನ್ನುತ್ತ ಬೀಗನು ಹೋಗಿಯೇ ಬಿಟ್ಟನು.
ಆ ಬಳಿಕ ಗಂಡಹೆಂಡಿರು ಕುಳಿತು ಉಳಿದಷ್ಟು ಹೋಳಿಗೆ, ತುಪ್ಪ ನಗು
ನಗುತ್ತ ಊಟಮಾಡಿದರು.
•