ಈ ಪುಟವನ್ನು ಪ್ರಕಟಿಸಲಾಗಿದೆ
೧೪೮
ಜನಪದ ಕಥೆಗಳು
ಆದರೆ ಅಕ್ಕನ ಇಡಿಯ ಶರೀರದೊಡನೆ ಮೇಲೆತ್ತಿದ್ದ ಕೈಗಳೆರಡೂ ಅಡಗಿಕೊಂಡವಾದರೂ ಮುಗಿದ ಹಸ್ತಗಳು ಮಾತ್ರ ಹೊರಗೆ ಕಾಣಿಸಿಕೊಂಡವು.
ಅದನ್ನೆಲ್ಲ ಕಂಡು ತಮ್ಮನಿಗೆ ಪಶ್ಚಾತ್ತಾಪವಾಯಿತು. ಅಕ್ಕನನ್ನು ಕಳೆದುಕೊಂಡೆನೆಂದು ದಿಕ್ಕು ಮರುದನಿಗೊಡುವಂತೆ ಆಕ್ರೋಶಿಸತೊಡಗಿದನು. ಮುಂದುಗಾಣದೆ ಎತ್ತು ಎಳೆದುಕೊಂಡು ಊರದಾರಿ ಹಿಡಿದನು. ತಾಯಿ ತಂದೆಗಳ ಮುಂದೆ ಅಕ್ಕನ ಸುದ್ಧಿಯನ್ನು ಏನೆಂದು ಹೇಳಲಿ—ಎಂಬ ವಿಚಾರದಲ್ಲಿಯೇ ಮುಳುಗಿದನು. ನೆಲದಲ್ಲಿ ಹುಗಿದುಹೋದ ಆ ಪವಿತ್ರಾತ್ಮಳ ಹಸ್ತಗಳೆರಡೂ ಮುಂದೆ ಎರಡು ಎಲೆಗಳಾಗಿ ಚಿಗುರಿದವು. ಒಂದು ಅಕ್ಕೆಲೆ, ಇನ್ನೊಂದು ತಮ್ಮಕ್ಕ.
ಅಂದಿನ ಆ ಅಕ್ಕೆಲೆಯೇ ಎಕ್ಕೆಲೆ ಎನಿಸಿತು. ತಮ್ಕಕ್ಕವೆ ತಂಬಾಕು ಎನಿಸಿತು. ಆ ಪವಿತ್ರಾತ್ಮಳು ಕೊಟ್ಟುಹೋದ ಎಕ್ಕೆಲೆ ತಂಬಾಕುಗಳೆರಡೂ ಅತಿಥಿಸತ್ಕಾರದಲ್ಲಿ ಹಿರಿಮೆಯಸ್ಥಾನ ಗಳಿಸಿದವು.
•