ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೮೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

ಕೊಂಡು ತಂದ ಮಾತು

ಚಿಕ್ಕ ಹಳ್ಳಿಯೊಂದರಲ್ಲಿ ಸಮಗಾರ ಗಂಡಹೆಂಡಿರಿದ್ದರು. ಗಂಡನು ಹಳೆಯ ಕಾಲ್ಮರೆಗಳನ್ನು ಗಟ್ಟಿಮಾಡಿಕೊಡುವ ಕೆಲಸಮಾಡುತ್ತಿದ್ದನು. ಇಡಿಯವಾರ ದುಡಿದರೂ ಅವನಿಗೆ ಒಂದು ರೂಪಾಯಿಗಿಂತ ಹೆಚ್ಚು ಗಳಿಕೆ ಆಗುತ್ತಿದ್ದಿಲ್ಲ.

ನೆರೆಯೂರಿನ ಸಂತೆಗೆ ಹೋಗಿ ಉಪ್ಪು ಮೆಣಸಿನ ಕಾಯಿ ಮೊದಲಾದವುಗಳನ್ನು ಕೊಂಡುತರುವದಕ್ಕಾಗಿ ಹೆಂಡತಿಯು ಹನ್ನೆರಡಾಣೆ ಹಣವನ್ನು ಗಂಡನ ಕೈಗಿತ್ತಳು. ಹಸಿವೆಯಾದಾಗ ಉಣ್ಣಲೆಂದು ಒಂದೆರಡು ರೊಟ್ಟಿಗಳನ್ನೂ ಕಟ್ಟಿದಳು.

ಸಮಗಾರನು ದಾರಿ ಹಿಡಿದು ಸಾಗುತ್ತಿರಲು ಅವನಿಗೆ ಕುದುರೆಯ ಮೇಲೆ ಕುಳಿತು ಸಂತೆಗೆ ಹೊರಟವನು ಜೊತೆಯಾದನು. ಅವನನ್ನು ಕುರಿತು ಸಮಗಾರನು - “ಅಪ್ಪಾ ಏನಾದರೊಂದು ಮಾತುಹೇಳಿರಿ. ಅಂದರೆ ದಾರಿಸಾಗುತ್ತದೆ” ಎಂದನು.

“ಮಾತೆಂದರೆ ಸುಮ್ಮನೇ ಬರುವವೇ ? ಮಾತಿಗೆ ರೊಕ್ಕ ಬೀಳುತ್ತವೆ” ಎಂದನು ಕುದುರೆಯವನು.

“ಒಂದು ಮಾತಿನ ಬೆಲೆ ಎಷ್ಟು ?” ಸಮಗಾರನ ಪ್ರಶ್ನೆ.

“ನಾಲ್ಕಾಣೆಗೊಂದು ಮಾತು.”

ಹೆಂಡತಿ ಸಂತೆಗಾಗಿ ಕೊಟ್ಟ ಹನ್ನೆರಡಾಣೆಗಳಲ್ಲಿ ನಾಲ್ಕಾಣೆಕೊಟ್ಟು ಒಂದು ಮಾತು ಕೊಂಡರಾಗುತ್ತದೆ. ಕೊಂಡಮಾತು ಎಂಥವಿರುತ್ತವೆಯೋ ನೋಡೋಣ - ಎಂದುಕೊಂಡು, ಕಿಸೆಯೊಳಗಿನ ನಾಲ್ಕಾಣೆ ರೊಕ್ಕ ತೆಗೆದು ಕುದುರೆಯವನ ಕೈಯಲ್ಲಿಟ್ಟು - “ಒಂದು ಮಾತು ಹೇಳಿರಿ” ಅಂದನು.

“ಸತ್ತವನನ್ನು ಹೊತ್ತು ಹಾಕಬೇಕು.”

“ಇಷ್ಟಕ್ಕೇ ನಾಲ್ಕಾಣೆ ಕೊಟ್ಟಂತಾಯಿತು. ಆಗಲಿ. ಇನ್ನೊಂದು ಮಾತು ಹೇಳಿ. ಇಕೊಳ್ಳಿರಿ, ನಾಲ್ಕಾಣೆ” ಸಮಗಾರನು ಅನ್ನಲು

“ಸರಕಾರದ ಮುಂದೆ ಸುಳ್ಳು ಹೇಳಬಾರದು. ಇದು ಕುದುರೆಯವನು ಹೇಳಿದ ಎರಡನೇಮಾತು. ಸಮಗಾರನಿಗೆ ಅನಿಸಿತು “ಇನ್ನುಳಿದ ನಾಲ್ಕಾಣೆಯಿಂದ ಸಂತೆಯಲ್ಲಿ ಏನುಕೊಳ್ಳಲಿಕ್ಕಾಗುತ್ತದೆ? ಇನ್ನೊಂದು ಮಾತನ್ನೇ