ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೮೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ನೀತಿ ಕಥೆಗಳು

೧೫೫

ಅದನ್ನೆಲ್ಲ ಕಂಡು ನೆರೆಹೊರೆಯವರಿಗೆ ಆಶ್ಚರ್ಯವೆನಿಸಿತು.

ಸಮಗಾರನ ಹೆಂಡತಿಯನ್ನು ಒತ್ತಟ್ಟಿಗೆ ಕರೆದು, ನೆರೆಮನೆಯ ಹೆಣ್ಣುಮಗಳು ಕೇಳಿದಳು - “ಇದೆಲ್ಲ ಐಶ್ವರ್ಯ ಎಲ್ಲಿಂದ ಬಂತು ?”

“ಸಂತೆಗೆ ಹೋದಾಗ ನನ್ನ ಗಂಡನು ಹೊಟ್ಟೆತುಂಬಲಿಲ್ಲವೆಂದು ಎಕ್ಕೆಲೆಯ ಹಾಲು ಕುಡಿದು, ಕುಳಿತಾಗ ರೊಕ್ಕದ ಹಮ್ಮೀಣಿಯೇ ಕಾಣಿಸಿತಂತೆ”' ಎಂದು ಸಮಗಾರತಿ ಹೇಳಿದಳು.

ನೆರೆಮನೆಯ ಹೆಂಗಸು ತನ್ನ ಗಂಡನನ್ನು ಸಂತೆಗೆ ಕಳಿಸುವ ಎತ್ತುಗಡೆ ಮಾಡಿದಳು. ಎಕ್ಕೆಲೆಯ ಹಾಲು ಕುಡಿಯುವ ರಹಸ್ಯವನ್ನು ಹೇಳಿಕೊಟ್ಟಳು. ಕೈಯಲ್ಲಿ ಹನ್ನೆರಡಾಣೆ ರೊಕ್ಕ ಕೊಟ್ಟಳು.

ಶ್ರೀಮಂತನಾಗಬೇಕೆಂಬ ಹವ್ಯಾಸದಿಂದ ಹೆಂಡತಿಯ ಮಾತು ಕೇಳಿ ಎಕ್ಕೆಲೆಯ ಹಾಲು ಕುಡಿದು, ಹೊಟ್ಟೆಯುರಿಯುವದೆಂದು ಮನೆಗೆ ಬಂದು ಆ ಗೃಹಸ್ಥನು ಸತ್ತೇಹೋದನು. ಆತನ ಹೆಂಡತಿ ಸಮಗಾರ್‍ತಿಯ ಮಾತು ಕೇಳಿದ್ದರಿಂದ ಹೀಗಾಯಿತೆಂದು ಬೊಬ್ಬಿಟ್ಟಳು.

ಸರ್ಕಾರದವರು ಸಮಗಾರ್ತಿಯನ್ನು ಕರೆಸಿ ಕೇಳಿದರೆ ಆಕೆ ತನ್ನ ಗಂಡನ ಹೆಸರು ಹೇಳಿದಳು. ಸಮಗಾರನನ್ನು ಕರೆಯಿಸಲು, ಸರ್ಕಾರದ ಮುಂದೆ ಸುಳ್ಳು ಹೇಳಬಾರದು - ಎ೦ಬ ಮಾತು ನೆನಪಿಗೆ ಬಂತು. ನಡೆದ ಸಂಗತಿಯನ್ನೆಲ್ಲ ಹೇಳಿದನು. ಹೆಂಡತಿಯ ಮುಂದೆ ನಿಜ ಹೇಳಬಾರದು - ಎ೦ಬ ಮಾತಿನ ಪ್ರಕಾರ ನಾನು ಆಕೆಗೆ ಎಕ್ಕಲೆಯ ಕಥೆಯನ್ನು ಹುಟ್ಟಿಸಿಕೊಂಡು ಹೇಳಿದೆನೆಂದೂ ನುಡಿದನು.

“ಎಕ್ಕೆಲೆಯ ಹಾಲು ಕುಡಿದರೆ ಹೊಟ್ಟೆಯಲ್ಲಿ ಉರುಪುಬಿಟ್ಟು ಸಾಯುವರು” ಎಂಬುದು ನಿನ್ನ ಗಂಡನಿಗೆ ತಿಳಿಯಲಿಲ್ಲವೇ ? ಹೋಗು. ಸಮಗಾರ್ತಿಯದಾಗಲಿ ಸಮಗಾರನದಾಗಲಿ ಏನೂ ತಪ್ಪಿಲ್ಲ. ನಿನ್ನದೇ ತಪ್ಪು. ಮಾಡಿದ್ದನ್ನು ಭೋಗಿಸು?” ಎಂದರು ಸರ್ಕಾರದವರು ಆಕೆಗೆ.

 •