ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೮೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ನೀತಿ ಕಥೆಗಳು

೧೫೯

ಹಾಗೆ ಬಿಗಿಹಿಡಿಯುವಾಗ, ಹುಣ್ಣು ಬಿದ್ದಿದ್ದರಿಂದ ಅಸಹ್ಯವಾದ ನೋವುಂಟಾಗುವದು. ಅದೆಷ್ಟು ರಭಸದಿಂದ ಚಂಗನೆ ನೆಗೆದು ಬಂದವರ ಮೈಮೇಲೆ ಹೋಗುವದೋ, ಅಷ್ಟೇ ವೇದನೆಯಿಂದ “ಆ೦sss” ಎಂದು ನರಳಿ ಹಿಂದಿರುಗಿ ಬರತೊಡಗಿತು.

ಗುದದ್ವಾರದಲ್ಲಿ ಬಿದ್ದ ಹುಣ್ಣಿನ ನೋವಿಗಂಜಿ ಅದು, ರಭಸದಿಂದ ಬೊಗಳಿ ಬಂದವರ ಮೇಲೆ ಹೋಗುವುದನ್ನು ಒಮ್ಮೆಲೇ ಕಡಿಮೆ ಮಾಡಿತು. ಅಲ್ಲಿಯವರಿಗೆ ಆ ಹುಣ್ಣು ಮಾಯಿಸುವ ಉಪಾಯವನ್ನೇ ಮಾಡಲಿಲ್ಲ ಗೌಡರು.

“ಕಳೆನೋಡಿ ಕೇರು ಹಾಕಿದರೆ ಹಾದಿಗೆ ಬಾರದವರಾರು” ಎಂದು ಗೌಡರ ಮೇಲಿಂದ ಮೇಲೆ ಮಾತಿನಲ್ಲಿ ನುಡಿಯತೊಡಗಿದರು. ಕೇಳಿದವರಿಗೆ ಅದು ಸತ್ಯವೂ ಅನಿಸಿತು.

 •