ಕಥೆಯದೇ ಕಥೆ
ಅಳಿಯ ಇದ್ದನು. ಹಾಡಬಂದರೂ ಹಾಡು ಹೇಳುತ್ತಿದ್ದಿಲ್ಲ ; ಕಥೆ ಬಂದರೂ ಕಥೆ ಹೇಳುತ್ತಿದ್ದಿಲ್ಲ. “ಏನು ಬಂದು ಏನುಕಂಡೆವು. ಇವನೇನು ಒಂದು ಹಾಡು ಹೇಳಲಿಲ್ಲ ; ಕಥೆ ಹೇಳಲಿಲ್ಲ. ಇವನನ್ನು ಹೇಗಾದರೂ ಮಾಡಿ ಕೊಲ್ಲಬೇಕು” ಎಂದು ಕಥೆ ಹಂಚಿಕೆ ಹಾಕಿತು.
“ಮುಂಜಾನೆ ಎದ್ದಕೂಡಲೇ ಜೋಡು ಮೆಡುತ್ತಾನೆ. ಆವಾಗ ಅವನಿಗೆ ಚೇಳು ಆಗಿ ಕಡಿಯಬೇಕು. ಹೆಂಡತಿಯನ್ನು ಕರೆಯಲಿಕ್ಕೆ ಹೋಗುತ್ತಾನೆ. ಆವಾಗ ಅಗಸೆ ಅವನ ತಲೆಯಮೇಲೆ ಬೀಳುವಂತೆ ಮಾಡಬೇಕು” ಹೀಗೆನ್ನುವ ಕಥೆಯ ಮಾತನ್ನು ಆಳುಮಗ ಕೇಳಿರುತ್ತಾನೆ.
“ಎವ್ವಾ ಎವ್ವಾ ನಾನೂ ಹೇಣತೀಗಿ ಕರಕೊಂಡು ಬರ್ತಿನಿ” ಎಂದು ಅವ್ವನಿಗೆ ಕೇಳಿ, ಆಕೆಯ ಅಪ್ಪಣೆ ಪಡೆಯುತ್ತಾನೆ, ಆ ಅಳಿಯ.
ಆವಾಗ ಆಳುಮಗ ಅನ್ನುತ್ತಾನೆ. “ನಾನು ಬರ್ತಿನಿ, ನಿನ್ನೊಡನೆ ಧಣೀ” “ಯಾತಕ್ಕ ಬರತೀಯೋ ಎತ್ತು ದನ ನೋಡಕೋತ ಇರು” ಎಂದರೂ ಕೇಳುವದಿಲ್ಲ. ಕುದುರೆಯ ಮೇಲೆ ಜೀನು ಬಿಗಿದು ಸಜ್ಜುಗೊಳಿಸುತ್ತಾನೆ. ಧಣಿಯು ಮುಂಜಾನೆ ಎದ್ದು ಜೋಡು ಮೆಡುವಷ್ಟರಲ್ಲಿ ಆಳು ಜೋಡಿನಲ್ಲಿರುವ ಚೇಳನ್ನು ನೋಡಿ ಅದನ್ನು ಕಡಿದು ಕಿಸೆಯಲ್ಲಿ ಹಾಕಿಕೊಂಡುಬಿಟ್ಟನು.
ಊರುಬಿಟ್ಟು ಹೊರಬೀಳುವಾಗ ಆಳು ಸುತ್ತು ಸುತ್ತು ದಾರಿಯಲ್ಲಿ ಕರಕೊಂಡು ಹೊರಟನು. ಅಗಸೆಯ ಎರಡೂ ದಾರಿ ಬಿಟ್ಟು, ಮೂರನೇ ಅಡ್ಡದಾರಿ ಹಿಡಿದು ಊರ ದಾಟಲಿಕ್ಕೆ ಅನುವು ಮಾಡಿಕೊಟ್ಟನು.
ಇಷ್ಟೆಲ್ಲ ಪಾರು ಆಗಿ ಅತ್ತೆಮಾವನ ಊರು ತಲುಪುತ್ತಾರೆ. ಅಲ್ಲಿ ಕೈಕಾಲು ತೊಳೆಯಲಿಕ್ಕೆ ಮನೆಯವರು ನೀರು ಕೊಟ್ಟರು; ಉಣಬಡಿಸಿದರು. ಬಹಳ ದಿನಗಳ ಮೇಲೆ ಬಂದವನೆಂದು ತಿಳಿದು ಹಾಸಿಗೆ ಮಾಡಿಕೊಟ್ಟು, ಅಳಿಯನಿಗೆ ಮಲಗಲು ಹೇಳಿದರು. ಪ್ರವಾಸದಿಂದ ದಣಿದ ಅಳಿಯ ಮಲಗಿಬಿಟ್ಟನು. ಹೆಂಡತಿಯ ನಡತೆ ಸರಿಯಾಗಿರಲಿಲ್ಲ. ಗಂಡನು ಮಲಗಿದ್ದನ್ನು ನೋಡಿದ ಕೂಡಲೇ, ದಿನಾಲು ಹೋಗುವಂತೆ ಮನೆಬಿಟ್ಟು ಹೊರಗೆ ಹೊರಟಳು. ಅವಳ ಹಿಂದಿನಿಂದ