“ನಮ್ಮಲ್ಲಿ ಬಂಗಾರದ ತೂಗುಮಂಚ ಅದೆ. ನಮ್ಮ ಮನೆಯಲ್ಲಿ ಇರಬಾ" ಎಂದು ಹೇಳಿ, ಆ ಹೆಣ್ಣುಮಗಳನ್ನು ಬಾವಿಯೊಳಗಿರುವ ತನ್ನ ಮನೆಗೆ ಕರೆದೊಯ್ದಿತು ನಾಗೇಂದ್ರ.
ಇತ್ತ ಕಡೆಗೆ ಐದು ತಿ೦ಗಳು ಹೋಗಿ ಒಂಬತ್ತು ತಿಂಗಳಿಗೆ ಮೀನಪ್ಪನಿಗೆ ಸಮಾಚಾರ ಹೋಯಿತು. ಐದು ಕ್ಳೈ ಮುಷ್ಟಿಯಿಂದ ಐದು ಹಿಡಿ ಅಕ್ಕಿ ಒಂದು ಲಿಂಗ ಕೊಟ್ಟರು. ತೊಟ್ಟಿಲಿಗೆಂದು ಉಂಗುರ, ಬಿಂದುಲಿ ತೆಗೆದುಕೊಂಡು ಬಂದರು. “ಕೂಸು ಚೆನ್ನಾಗಿದೆ. ಆದರೆ ಹೆಣ್ಣುಮಗಳ ಕಣ್ಣು ಹೋಗಿವೆ” ಎಂದು ಮೀನಪ್ಪನ ಮನೆಯವರಿಗೆ ಸುಳ್ಳು ಹೇಳಿದರು.
ಕುರುಡಿಮಗಳು ಮೊದಲಿನ ಗಂಡನನ್ನು ಮಡಿಜೆಹಾಕಿದಳು. ಮನಸ್ಸಿಲ್ಲದ ಮನಸ್ಸಿನಿಂದ ಕೂಸಿಗೆ ತೊಟ್ಟಿಲಲ್ಲಿ ಹಾಕಿ, ಮೀನಪ್ಪ ಮತ್ತು ಅವನ ತಾಯಿ ತಂದೆ ತಿರುಗಿ ಬಂದರು. ಮುಂದೆ ಐದರಲ್ಲಿ ಕರಕೊಂಡು ಬ೦ದಾಗ ಏನೆಂಬೂದು ತಿಳಿಯುತ್ತದೆ - ಅಂದುಕೊಂಡರು. ಆದರಂತೆ ಕರಕೊಂಡೂ ಬಂದರು. ಒಬ್ಬರೂ ಅವಳ ಕೂಡ ಮಾತಾಡಲಿಲ್ಲ.
ಮೀನಪ್ಪನ ನಿಜವಾದ ಹೆಂಡತಿ ಬಾವಿಯಲ್ಲಿ ಹಡೆದಳು. ಬಾಣಂತನ ನಡೆಯಿತು. ಕೂಸಿಗೆ ತೊಟ್ಟಿಲಲ್ಲಿ ಹಾಕಿದರು. ನಾಗೇಂದ್ರ ತೊಟ್ಟಿಲು ಬಟ್ಟಲು ಕೊಟ್ಟನು. ಮಿಡಿ ನಾಗೇಂದ್ರ ಬಾವಿಯ ಕಟ್ಟೆಯ ಮೇಲಿಂದ ಇಳಿದು ಕೆಳಗೆ ಮೇಯಿತ್ತಿದ್ದ. ಅಲ್ಲೊಬ್ಬ ಬಳೆಗಾರ ಹೊರಟಿದ್ದನು. ಮಿಡಿನಾಗೇಂದ್ರ ಅವನನ್ನು ಕರೆದು ಹೇಳಿದನು - “ನಮ್ಮಕ್ಕನಿಗೆ ಬಳೆ ಇಡಿಸುವದದೆ. ನೀ ಬರಬೇಕು” ಬಳೆಗಾರನು ಒಪ್ಪಿಕೊಂಡನು.
ಬಳೆಗಾರನು ಬಾವಿಯಲ್ಲಿ ಇಳಿಯುತ್ತ ಹೊರಟಂತೆ, ನೀರು ಮೆಟ್ಟು ಮೆಟ್ಟಿಲಂತೆ ಕೆಳಗಿಳಿಯುತ್ತ ಹೋಯಿತು. ಬಳೆಗಾರನು ನಾಗೇಂದ್ರನ ಮನೆ ತಲುಪಿದಾಗ - ಹೆಣ್ಣು ಮಗಳು ಮಗನಿಗೆ ಆಡಿಸುತ್ತಿದ್ದಳು - “ಮೀನಪ್ಪನ ಮಗ ಮೀನಾಕುಮಾರ, ಸುಮ್ಮನೆ ಕೂಡಪ್ಪ ಬಾ ನನ್ನ ಕಂದಾ ಬಗಲಾಗ.”
ಮೀನಪ್ಪನ ಊರಿಗೆ ಬಳೆಗಾರ ಬಂದನು. ಕುರುಡಿ ತನಗೆ ಬಳೆಯಿಡಿಸಲು ಹೇಳಿದಳು. ಆಕೆಯ ಕೂಸು ಅಳಹತ್ತಿತು - “ಏನು ಅಳತಾದ ಈ ಕೂಸು. ಬಾಡಕೋ. ಕಾಗಿ ಆಗ್ಯಾದ” ಇಂಥ ಶಬ್ಧ ಉಪಯೋಗಿಸಬೇಡ ಎಂದನು ಬಳೆಗಾರ. ಭಾರಂಗ ಬಾವಿಯೊಳಗೆ ಒಬ್ಬ ಹೆಣ್ಣು ಮಗಳು ಕೂಸಿಗೆ ಆಡಿಸಿದ ಕಥೆ ಹೇಳಿದನು - “ಮೀನಪ್ಪನ ಮಗ ಮೀನಾಕುಮಾರ, ಸುಮ್ಮನೆ ಕೂಡಪ್ಪ” ಎಂದು ಆ ಹೆಣ್ಣು ಮಗಳು ಅದೆಷ್ಟು ಚಲೋ ಆಡಿಸುತ್ತಿದ್ದಳು ನೋಡಬಾರದೇ?”