ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೨೦೭

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
೧೮೦
ಜನಪದ ಕಥೆಗಳು

“ನಾನೂ ನಿನ್ನ ಸಂಗಡ ಬರಲಿಯಾ?” ಎಂದು ಚೇಳು ಕೇಳಿಕೊಂಡಿತು. ಚೋಟಪ್ಪನು ಆಗಲಿ ಎನ್ನಲು, ಚೇಳು ಜೋಟಪ್ಪನನ್ನು ಹಿಂಬಾಲಿಸಿತು. ಹೀಗೆ ಇಬ್ಬರೂ ಸಾಗಿದಾಗ ಹಾದಿಯ ಮೇಲೆ ಬಿದ ಒಂದು ಗುಂಡುಕಲ್ಲು ಮಾತಾಡಿಸಿತು -“ಇಬ್ಬರೂ ಎಲ್ಲಿ ನಡೆದಿರುವಿರಿ?”

ಚೇಳು ಹೇಳಿತು - “ಜೋಟಪ್ಪನ ಎತ್ತುಗಳನ್ನು ಯಾರೋ ಕದ್ದೊಣ್ದಿದ್ದಾರೆ. ನಾವು ಹುಡುಕಲು ಹೊರಟಿದ್ದೇವೆ.”

“ಹಾಗಾದರೆ ನಾನೂ ನಿಮ್ಮೊಡನೆ ಬರುವೆನು” ಎಂದು ಗುಂಡುಕಲ್ಲು ಉತ್ಸಾಹ ತೋರಿಸಲು, ಚೋಟಪ್ಪನು “ಆಗಲಿ ಹೊರಡು” ಎಂದನು.

ಈಗ ಪ್ರವಾಸಿಕರು ಮೂವರಾಗಿ ಹೊರಟರು; ಹೊರಟೇ ಹೊರಟರು. ಎತ್ತುಗಳು ಕಣ್ಣಿಗೆ ಬೀಳಲಿಲ್ಲ. ಮುಂದೆ ಒಂದು ಕಂಟಿಂಹಲ್ಲಿ ಒಂದು ಬುರಲಿ ಎಂಬ ಕಾಡುಪ್ಸ್ ಕುಳಿತಿತ್ತು ಅದು ಕೇಳಿತು - “ಎಲ್ಲಿಗೆ ಸಾಗಿದ್ದೀರಿ ಜೊತೆಯಾಗಿ?” ಅವು ತಾವು ಹೊರಟಕಾರಣವನ್ನು ಹೇಳಿದವು. ಅವರ ಅಪ್ಪಣೆ ಪಡಕೊಂಡು ಬುರಲಿಂಯೂ ಅವರೊಡನೆ ಮುಂದುವರಿಯಿತು. ಆ ನಸುಬೆಳಕಿನಲ್ಲಿಯೇ ಚೋಟಪ್ಪನು ತನ್ನ ಎತ್ತುಗಳನ್ನು ಒಂದು ಕೊಟ್ಟಿಗೆಯಲ್ಲಿ ಕಂಡನು. ತನ್ನ ಸಂಗಡಿಗರಿಗೆ ತಾನು ಹೇಳಜೇಕಾದುದನ್ನೆಲ್ಲ ಹೇಳಿ ಚೋಟಪ್ಪನು ದವಣಿಂಹಲ್ಲಿ ಅಡಗಿಕೊ೦ಡನು. ಚೇಳು ಮೇವಿನ ಹತ್ತಿರ ಸುಳಿದಾಡತೊಡಗಿತು. ಗುಂಡುಕಲ್ಲು ಚಪ್ಪರದ ಮೇಲೇರಿ ಕುಳಿತಿತು. ಬುರುಲಿಯು ಅಡಿಗೆಮನೆಯ ಒಲೆಯಲ್ಲಿ ಅವಿತುಕೊಂಡಿತು.

ಎತ್ತುಗಳನ್ನು ಅಟ್ಟಿಕೊಂಡು ಬಂದ ಒಕ್ಕಲಿಗನು ಸಂಜೆಯ ಊಟ ತೀರಿಸಿಕೊಂಡು ಕೊಟ್ಟಿಗೆಯ ಕಡೆಗೆ ಬಂದನು. ಎತ್ತುಗಳ ಮುಂದೆ ಮೇವು ಕಾಣಲಿಲ್ಲ. ಕಣಿಕೆ ಕತ್ತರಿಸಿ ತಂದು ಹಾಕಬೇಕೆಂದು ಮೇಣಿನ ಕಡಗೆ ಗೋದಲಿಗೆ ಹೋದನು. ಒಕ್ಕಲಿಗನ ಮನೆ, ಅದೂ ಹಳ್ಳಿಯಲ್ಲಿ. ಅಂದಮೇಲೆ ಒಂದೇ ದೀಪ ಜಿಣಿಮಿಣಿ ಎಂದು ಉರಿಯುತ್ತಿತ್ತು. ಎಲ್ಲಿ ? ಅಡಿಗೆ ಮನೆಂಯಲ್ಲಿ. ಒಕ್ಕಲಿಗನು ಕತ್ತಲಲ್ಲಿಯೇ ಕೈಯಾಡಿಸುತ್ತ ಮೇವಿನ ಬಳಿಗೆ ಹೇಗಿ, ಕಣಿಕೆಯನ್ನು ತೆಕ್ಕೆಯಲ್ಲಿ ಹಿಡಿದು ಎತ್ತುವಷ್ಟರಲ್ಲಿ ಕಾಲಿಗೆ ಚೇಳು ಕುಟುಕಲು ಬಲವಾಗಿ ಕೂಗಿದನು.

ಎತ್ತಿನ ಮೈ ತಿಕ್ಕುತ್ತಿದ್ದ ಒಕ್ಕಲಿಗನ ಮಗನು ಅವಸರದಿಂದ ತಂದೆಯ ಬಳಿಗೆ ಬರುವಷ್ಟರಲ್ಲಿ ಚಪ್ಪರದ ಮೇಲೆ ಕುಳಿತ ಗುಂಡುಗಲ್ಲು ಉರುಳಲು, ಆತನ ತಲೆಯೊಡೆದು ನೆತ್ತರು ಸುರಿಯತೊಡಗಿತು. “ದೀಪವನ್ನಾದರೂ ತಕ್ಕೊಂಡು ಬರಬಾರದೇ” ಎಂದು ಅರಚಲು, ಅಡಿಗೆ ಮನೆಯಲ್ಲಿದ್ದ ಹೆಣ್ಣು ಮಗಳು