ಈ ಪುಟವನ್ನು ಪ್ರಕಟಿಸಲಾಗಿದೆ
ಪ್ರಾಣಿ ಕಥೆಗಳು
೧೮೧
ಸಾವರಿಸಿಕೊಂಡು ಆ ಜಿಣಿಮಿಣಿ ದೀಪ ಎತ್ತಿಕೊಳ್ಳುವಷ್ಟರಲ್ಲಿ ಒಲಿಯೊಳಗಿನ ಬುರಲಿ ಬುರ್ರನೇ ಹಾರಿಹೋಗಿದ್ದರಿಂದ ದೀಪ ಆರಿತಲ್ಲದೆ, ಆ ಒಕ್ಕಲಗಿತ್ತಿಯ ಕಣ್ಣೊಳಗೆ ಬೂದಿ ತೂರಿ ಬೀಳಲು ಕಣ್ಣೊರೆಸುತ್ತ “ಅಯ್ಯಯ್ಯೋ' ಎಂದು ಹಲುಬತೊಡಗಿದಳು. ಆ ಸಂಧಿಯಲ್ಲಿ ಸಾಧಿಸಿ ದವಣಿಯಲ್ಲಿ ಅಡಗಿಕೊಂಡಿದ್ದ ಚೋಟಪ್ಪನು ತನ್ನ ಎತ್ತುಗಳನ್ನು ಬಿಟ್ಟಕೊ೦ಡು ಹೊರಬಿದ್ದನು. ಚೇಳು, ಗುಂಡಗಲ್ಲು ಬುರಲಿ ಅವನನ್ನು ಬೆಂಬಲಿಸಿದರು. ಹೀಗೆ ಚೋಟಪ್ಪನು ಗೆಳೆಯರ ನೆರವಿನಿಂದ ತನ್ನ ಎತ್ತುಗಳನ್ನು ದೊರಕಿಸಿಕೊಂಡು ಮನೆಗೆ ಮರಳಿದನು.
•