ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೨೧೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

ಕಾಮಣ್ಣ ಭೀಮಣ್ಣ

ಕುರಿಕಾಯುವ ಜೊತೆಗಾರರಾದ ಕಾಮಣ್ಣ ಭೀಮಣ್ಣ ಅವರಿಬ್ಬರು ತಮ್ಮ ಕುರಿ ಹಿಂಡಿನೊಡನೆ ಅಡವಿಯಲ್ಲಿಯೇ ಅಡ್ಡಾಡುವರು; ಅಡವಿಯಲ್ಲಿಯೇ ವಾಸಿಸುವರು. ತಮ್ಮಷ್ಟು ಜಾಣರಾದವರು ಇನ್ನಾರೂ ಇಲ್ಲವೆಂದೇ ಅವರು ಬಗೆದಿದ್ದರು. ಅಂಥ ಜಾಣರಾಗಿದ್ದರೂ ಅವರಿಬ್ಬರೂ ಬಗೆಹರಿಯಲಾರದ ಒಂದು ಸಮಸ್ಯೆಯಿತ್ತು. ಅದೇನೆಂದರೆ - ಹೋಳಿಗೆಂಯಲ್ಲಿ ಹೂರಣವನ್ನು ಯಾವದಾರಿಂಯುಲ್ಲಿ ಹಾಕುತ್ತಾರೆ?

ಅವರಿಬ್ಬರು ಕುರಿ ಹಿಂಡು ಮುಂದೆ ಮಾಡಿಕೊಂಡು ಸಾಗಿದಾಗ ಒಂದು ದೊಡ್ಡ ಹೊಲದಲ್ಲಿ ಹಾಂಯ್ದು ಹೋಗಬೇಕಾಯಿತು. ಅಲ್ಲಿ ಏಳು ಗಳೆ ನಿಂತಿದ್ದವು; ಮತ್ತು ಹತ್ತಿರದಲ್ಲಿಯೇ ಹದಿನಾಲ್ಕು ಎತ್ತುಗಳು ಮೇಯುತ್ತಿದ್ದವು. ಗಳೆ ಹಾಗೂ ಎತ್ತುಗಳನ್ನು ಕಂಡು ಕಾಮಣ್ಣನಲ್ಲಿ ಗಣಿತದ ರೀತಿ ಸುಳಿದು ಬಂತು - “ಏ ಭೀಮಾ, ಇಲ್ಲಿ ನೋಡು. ಬೆಸ ಗಳೆ, ಸರಿ ಎತ್ತುಗಳಿವೆ. ಬೆಸ ಗಳೇಗಳಿಗೆ ಸರಿ ಎತ್ತುಗಳನ್ನು ಹೇಗೆ ಹೂಡುವರೋ ನೋಡಿಯೇ ಹೋಗೋಣ.”

ಅವರು ಮಂಡಿಗೆಯನ್ನೇನೊ ಹಾಗೆ ಮಾಡಿದರು, ಆದರೆ ಮುಖತಸಗ್ಗಿಸಿ ಸಾಗಿದ ಕುರಿಹಿಂಡು ಮುಂದಿನ ಮರಡಿಯೇರಿ ಹೋಗಿದ್ದರಿಂದ ಅವರು ಆ ಹೊಲದಲ್ಲಿ ಆಳುಗಳು ಬರುವವರೆಗೆ ನಿಲ್ಲದೆ, ಕುರಿಹಿಂಡು ಮೇಯುತ್ತಿರುವ ಮರಡಿಂಹನ್ನೇರಿ ಹೋದರು.

ಮುಂದೆ ಒಂದರ್ಧತಾಸಿನಲ್ಲಿ ಹೊರಳಿನೋಡಿದರೆ, ಎಲ್ಲ ಗಳೇಗಳನ್ನು ಎತ್ತುಗಳು ಎಳೆಯುತ್ತ ಉಳತೊಡಗಿದ್ದು ಕಾಣಿಸಿತು.

ಇನ್ನೊಮ್ಮೆ ಒಂದು ಜೋಳದ ಹೊಲದ ಬದಿಯಲ್ಲಿ ತಮ್ಮ ಹಿಂಡಿನೊಡನೆ ಹೊರಟಾಗ ಎಲ್ಲಾ ಕಡೆಗೂ ಕಣ್ಣಾಡಿಸಿ, ಕಣ್ಣೋಡಿಸಿ ನೋಡಿದರು. ಜೋಳದ ಬೆಳೆ ಎಡೆಗೆ ಬಂದಿತ್ತು. ಭೀಮಣ್ಣ ಕೇಳಿದನು - ಕಾಮಾ, ಈ ಒಕ್ಕಲಿಗರು ಗಿಪ್ಪದ ಹಾಲು ಕುಡಿದು ಬಾಳೆಮಾಡುವರೇನೋ ? ಇಡಿಯ ಹೊಲವನ್ನೆಲ್ಲ ಜೋಳಬಿಶ್ರಿಬಿಟ್ಟಿದ್ದಾರೆ. ನಾಳೆ ಬೆಳೆಯೆಲ್ಲ ತೆನಿಹಿಡಿದು, ಕಾಳು ಆಗಿ, ಹಕ್ಕಿ ಕಾವಲಿಗೆ ಬಂದಾಗ ಏತರಮೇಲೆ ನಿಂತು ಹಕ್ಕಿ ಹೊಡೆಯುತ್ತಾರೆ? ಅಟ್ಟ ಹಾಕುವುದೆಲ್ಲಿ?”