ಗಂಡ ಹೆಂಡಿರಿಬ್ಬರು. ಒಂದುದಿನ ಹೆಂಡತಿ ಮಾಲಾದಿ ಮಾಡಿ ಮೂರು ಉಂಡಿ ಕಟ್ಟಿಟ್ಟಳು. “ಮಾಲಾದಿ ನಾ ಮಾಡೀನು. ಎರಡು ನನಗೆ ಒ೦ದು ನಿನಗ” ಎಂದಳು ಹೆಂಡತಿ.
“ಇಲ್ಲ. ನಾ ಮಾಡಿಸಂದಾ೦ವ. ನನಗೆ ಎರಡು ಉಂಡಿ ನಿನಗೆ ಒಂದು ಉಂಡಿ” ಎಂದು ಗಂಡನವಾದ.
ಒಂದು ತಾಸು ಜಗಳಾಡಿದರು. ಯಾರೂ ಉಣ್ಣಲಿಲ್ಲ. ಕಡೆಯಲ್ಲಿ ಒಂದು ನಿರ್ಧಾರಕ್ಕೆ ಬಂದರು. - “ಯಾರು ಹೂ೦ ಅಂತಾರೊ ಅವರು ಒಂದು ತಿನ್ನಬೇಕು. ಸುಮ್ಮನೆ ಮನಗಿದವರಿಗೆ ಎರಡು?
ನಾಯಿ ಬಂದು ಮಾಾಲಾದಿ ತಿನ್ನೆ ಹತ್ತಿತು. ನಾಯಿಯನ್ನು ಹೊಡೆಯುವರಾರು? ಹೊಡೆದರೆ ಹೂಂ ಅನ್ನಬೇಕಾಗುತ್ತದೆ. ಹೂಂ ಅಂದವರಿಗೆ ಒಂದ ಉಂಡಿ. ಅದಕ್ಕಾಗಿ ಅವನೂ ಹೂಂ ಅನಲಿಲ್ಲ. ಅವಳೂ ಹೂಂ ಅನಲಿಲ್ಲ. ಹಾಗೇ ಮಲಗಿದರು.
ಹೊತ್ತು ಹೊರಟಿತು. ಸೂರ್ಯನು ಮಾರು ಮೇಲೆ ಏರಿ ಬಂದನು. ಅವರ ಮುಚ್ಚಿದ ತಟ್ಟಿ ಮುಚ್ಚಿದ ಹಾಗೆಯೇ ಇತ್ತು. ನೆರೆಹೊರೆಯವರು ತಟ್ಟಿ ಬಡಿದರು. ಹೂಂ ಅನಲಿಲ್ಲ; ಹಾಂ ಅನಲಿಲ್ಲ. ನಾಲ್ಕು ಮಂದಿ ನೆರೆದರು. ತಟ್ಟಿ ಮುರಿದರು. ಒಳಗೆ ಹೊಕ್ಕರು. ಇಬ್ಬರಿಗೂ ಮಾತಾಡಿಸಿ ನೋಡಿದರು. ಅಗಳಾಡಿಸಿ ನೋಡಿದರು. ಮಿಸುಕಲೇ ಇಲ್ಲ ಯಾರೂ.
ಇಬ್ಬರೂ ಸತ್ತಿದ್ದಾರೆಂದು ನಿರ್ಧರಿಸಿ ಕುಳ್ಳುಕಟ್ಟಿಗೆಗಳನ್ನು ಹೊತ್ತೊಂಯ್ದು ಸುಡುಗಾಡಿನಲ್ಲಿ ಒಗೆದು ಬ೦ದರು. ಇಬ್ಬರನ್ನೂ ನಾಲ್ಕು ನಾಲ್ಕು ಜನ ಹೊತ್ತರು. ಇಬ್ಬರೊಳಗಾರೂ ಹೂಂ ಅನಲಿಲ್ಲ. ಹೂಂ ಅಂದರೆ ಒಂದೇ ಉಂಡಿ ಅಲ್ಲವೇ?
ಕುಳ್ಳು ಕಟ್ಟಿಗೆಯ ತಾಳಿಯ ಮೇಲೆ ಹೆಣ ಒಗೆದರು. ಉರಿ ಹಚ್ಚಿದರು. ಚೌಕೀದಾರನನ್ನು ಅಲ್ಲಿ ನಿಲ್ಲಿಸಿ ಮಂದಿಯೆಲ್ಲ ತಂತಮ್ಮ ಮನೆಗ ಹೋದರು. ಬೆಂಕಿ ಹೊತ್ತಿದಂತೆ ಮೈಯೆಲ್ಲ ಸುಡುತ್ತ ಬಂತು. ಇಬ್ಬರಲ್ಲಿ ಒಬ್ಬರೂ ಸೋಲಲಿಲ್ಲ. ಕಿರಿ ಬೆರಳೊಂದು ಛಟ್ ಎಂದು ಸಿಡಿದು ಬಂದು ಚಿತ್ತು. “ಥೂ! ನೀನೇ